ಮುಂಬೈ: ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್’ನಲ್ಲಿ ನಿನ್ನೆ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು ಎರಡು ಗಂಟೆಗಳ ಸತತ ಪ್ರಯತ್ನದಿಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿನಂದಿಸಿದ್ದಾರೆ.
ಸಿಟಿ ಸೆಂಟರ್ ಮಾಲ್’ನಲ್ಲಿ ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ಸುಮಾರು 250-300 ಜನರಿದ್ದರು. ತಕ್ಷಣ 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. 20 ಅಗ್ನಿ ಶಾಮಕ ದಳ ವಾಹನಗಳು, ಏಳು ಜಟ್ಟಿಗಳ ಸಹಾಯದಿಂದ ಕಾರ್ಯಾಚರಣೆ ಮಾಡಲಾಗಿದೆ. ನಾಲ್ಕು ಮಹಡಿಯ ಕಟ್ಟಡದ ಹಲವು ಕಡೆ ಅಗ್ನಿ ಹರಡಿರುವಾದಾಗಿ ಅಗ್ನಿಶಾಮಕ ದಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಕಿ ಕಾಣಿಸಿಕೊಂಡುರುವುದಕ್ಕೆ ಕಾರಣ ಏನು ಎಂಬುದು ಇನ್ನೂ ನಿಖರವಾಗಿ ತಿಳಿದಿಲ್ಲ. ಘಟನೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ಸಿಬ್ಬಂದಿಯೋರ್ವರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿರುವುದಾಗಿ ವರದಿಯಾಗಿದೆ