ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮುಖ್ಯಮಂತ್ರಿ ಬದಲಾವಣೆ ಇಲ್ಲ : ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ವರದಿ, ಮಂಡ್ಯ:

ರಾಜ್ಯ ಉಸ್ತುವಾರಿ ಅರುಣ್‌ಸಿಂಗ್ ಅವರೇ ಹೇಳಿದ್ದಾರೆ. ಕೋವಿಡ್ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿರುವ ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದರು.
ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇನ್ನೂ ಎರಡು ವರ್ಷಗಳ ಕಾಲ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಇದರಲ್ಲಿ ಯಾವುದೇ ಅನುಮಾನವೂ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಮ್ಮಲ್ಲಿ ಯಾವುದೇ ಸಹಿ ಸಂಗ್ರಹವೂ ಇಲ್ಲ . ಒಟ್ಟಾರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆಯಂತೂ ಇಲ್ಲವೇ ಇಲ್ಲ ಎಂದು ಖಡಕ್ಕಾಗಿ ನುಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ, ಶಾಸಕರಾದ ಎಂ. ಶ್ರೀನಿವಾಸ್, ಸುರೇಶ್‌ಗೌಡ, ಡಾ. ಕೆ. ಅನ್ನದಾನಿ, ಕೆ.ಟಿ. ಶ್ರೀಕಂಠೇಗೌಡ, ಅಪ್ಪಾಜಿಗೌಡ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss