Monday, July 4, 2022

Latest Posts

ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಸಚಿವ ಎಸ್.ಟಿ.ಸೋಮಶೇಖರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮೈಸೂರು:

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪ್ರಧಾನಮಂತ್ರಿ ಹಾಗೂ ರಾಷ್ಟ್ರೀಯ ಅಧ್ಯಕ್ಷರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪರನ್ನು ಬದಲಾವಣೆ ಮಾಡುವುದು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು. ಆ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಆದರೆ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗುತ್ತೇವೆ ಎಂದರು.
ಉತ್ತರ ಕರ್ನಾಟಕ, ದಕ್ಷಿಣ ಕನ್ನಡದಲ್ಲಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿಯಿದೆ. ಆದರೆ ಮೈಸೂರು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ. ಕಬಿನಿ ಜಲಾಶಯಕ್ಕೆ ಒಳಹರಿವು ಕಡಿಮೆ ಆಗಿದೆ. ಈಗ 30 ಸಾವಿರ ಕ್ಯೂಸೆಕ್ ಹೊರಹರಿವು ಇದೆ. ಸುಮಾರು 60-70 ಸಾವಿರ ಕ್ಯೂಸೆಕ್ ನೀರು ಹರಿದರೆ ಮಾತ್ರ ಪ್ರವಾಹ ಉಂಟಾಗುತ್ತದೆ. ಕೆಆರ್‌ಎಸ್ ಅಣೆಕಟ್ಟೆಯಿಂದ ಒಂದೂವರೆ ಲಕ್ಷ ಕ್ಯೂಸೆಕ್ ಹೊರಹರಿವು ಇದ್ದರೆ, ಆಗ ತೊಂದರೆ ಆಗುತ್ತದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss