Saturday, June 25, 2022

Latest Posts

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದ ಸಲ್ಲಿಸಿದ ಮಾಜಿ ಸಿಎಂ ಎಚ್ ಡಿಕೆ

ಬೆಂಗಳೂರು: ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಆದೇಶ ಮಾಡಿದ ಬೆನ್ನಲ್ಲೇ , ಇಂದು
ಶಿಕ್ಷಕರಿಗೆ ಶೈಕ್ಷಣಿಕ ವರ್ಷದ ಮಧ್ಯಂತರ (ದಸರಾ ರಜೆ) ರಜೆಯನ್ನು ಕೂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಇದರಿಂದ ಸಂತೋಷಗೊಂಡ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಶ್ಲಾಘಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ಕಳೆದೊಂದು ವಾರದಿಂದ ಶಿಕ್ಷಕ ಸಮುದಾಯದ ನಾನಾ ರೀತಿಯ ಕಷ್ಟ ಕಾರ್ಪಣ್ಯಗಳನ್ನು ಕಂಡು ನನ್ನ ಮನಸು ವಿಹ್ವಲಗೊಂಡಿತ್ತು. ನನ್ನ ಭಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ಸಿಎಂ ಯಡಿಯೂರಪ್ಪ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
‘ರಾಜ್ಯದ ಶಿಕ್ಷಕರ ಸಮಸ್ಯೆಗಳನ್ನು ನನ್ನ ಸಮಸ್ಯೆಗಳೆಂದೇ ಸದಾ ಭಾವಿಸುವ ನನ್ನ ನಿಲುವಿಗೆ ರಾಜ್ಯದ ವಿದ್ಯಾರ್ಥಿಗಳು, ಪೋಷಕರು, ಮಾಧ್ಯಮಗಳು ಕೂಡ ನನ್ನ ಬೆಂಬಲಕ್ಕೆ ನಿಂತಿದ್ದು ಅವರಿಗೆಲ್ಲ ಕೃತಜ್ಞನಾಗಿದ್ದೇನೆ ಎಂದಿದ್ದಾರೆ.
‘ನರಜನ್ಮವ ತೊಡೆದು ಹರಜನ್ಮವ ಮಾಡಿದ ಗುರುವೆ ನಮೋ, ಭವಬಂಧನವ ಬಿಡಿಸಿ ಪರಮಸುಖವ ತೋರಿದ ಗುರುವೆ ನಮೋ, ಭವಿಯೆಂಬುದ ತೊಡೆದು ಭಕ್ತೆ ಎಂದೆನಿಸಿದ ಗುರುವೆ ನಮೋ, ಚೆನ್ನಮಲ್ಲಿಕಾರ್ಜುನನ ತಂದೆನ್ನ, ಕೈವಶಕ್ಕೆ ಕೊಟ್ಟ ಗುರುವೆ ನಮೋ ನಮೋ – ಅಕ್ಕಮಹಾದೇವಿ’ ಎಂಬುದಾಗಿ ಉದ್ಗರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss