Saturday, August 13, 2022

Latest Posts

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಕಾಡಿದ ಕೊರೊನಾ ವೈರಸ್: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಕೊರೊನಾ ಸೋಂಕು ತಗುಲಿರುವ ಸುದ್ದಿ ಹೊರಬಿದ್ದಿದೆ.
ಈ ಬಗ್ಗೆ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಖುದ್ದಾಗಿ ಬರೆದುಕೊಂಡಿದ್ದಾರೆ.

ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ, ಮುನ್ನೆಚ್ಚರಿಕಾ ದೃಷಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss