ಬೆಂಗಳೂರು :ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರ ತಂಡ ಮಾಹಿತಿ ನೀಡಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟ ಹಿನ್ನಲೆಯಲ್ಲಿ ಅವರು ಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಯಡಿಯೂರಪ್ಪ ಅವರಲ್ಲಿ ಕೊರೋನಾ ರೋಗದ ಲಕ್ಷದ ತೀವ್ರ ಕಡಿಮೆ ಇದೆ. ಅವರ ಆರೋಗ್ಯ ಸ್ಥಿರವಾಗಿದೆ. ಪ್ರೋಟೋಕಾಲ್ ಗಳ ಪ್ರಕಾರ ಸೂಕ್ತ ಚಿಕಿತ್ಸೆ ಪ್ರಾರಂಭಿಸಲಾಗಿದೆ ಭಯ ಪಡುವ ಅಗತ್ಯವಿಲ್ಲ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರ ತಂಡ ಮಾಹಿತಿ ನೀಡಿದೆ.