Thursday, August 11, 2022

Latest Posts

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಕೃಷಿ ಸಂಜೀವಿನಿ ವಾಹನಗಳ ಲೋಕಾರ್ಪಣೆ

ಹೊಸದಿಗಂತ ವರದಿ  ಕೊಪ್ಪಳ:

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಇವರ ಸಹಯೋಗದಲ್ಲಿ “ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ (ಕೃಷಿ ಸಂಜೀವಿನಿ) 20 ವಾಹನಗಳ ಲೋಕಾರ್ಪಣೆ’’ಯನ್ನು ಶನಿವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿದರು.
ಜಿಲ್ಲೆಯ ಕುಕನೂರು ತಾಲ್ಲೂಕಿನ ಭಾನಾಪುರ ಗ್ರಾಮದ ಕೊಪ್ಪಳ ಆಟಿಕೆಗಳ ಕ್ಲಸ್ಟರ್ ಭೂಮಿ ಪೂಜೆ ಸಮಾರಂಭ ವೇದಿಕೆಯ ಪಕ್ಕದಲ್ಲಿ ಜರುಗಿದ ಕೃಷಿ ಸಂಜೀವಿನಿ ವಾಹನಗಳ ಲೋಕಾರ್ಪಣೆ ಹಾಗೂ ಸ್ವಾಭಿಮಾನಿ ರೈತರ ಕಾರ್ಡ ವಿತರಣಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.  ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ ಪಾಟೀಲ್ ಅವರು ಪರೀಕ್ಷಾ ಉಪಕರಣಗಳ ಚಾಲನೆ ನೀಡಿದರು
.  ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ಯಮೆಗಳ ಸಚಿವ ಜಗದೀಶ ಶೆಟ್ಟರ, ಗಣಿ ಮತ್ತು ಭೂವಿಜ್ಞಾನ ಸಚಿವರಾದ ಸಿ.ಸಿ. ಪಾಟೀಲ್ ಅವರು ಘನ ಉಪಸ್ಥಿತರಿರದ್ದರು.
ಯಲಬುರ್ಗಾ ಶಾಸಕ ಹಾಲಪ್ಪ ಬಸಪ್ಪ ಆಚಾರ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ.ರಾಜಶೇಖರ್ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್. ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಕೆ.ರಾಘವೇಂದ್ರ ಹಿಟ್ನಾಳ ಹಾಗೂ ಬಸವರಾಜ ದಢೇಸೂಗೂರು,ಅನೇಕರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss