Sunday, August 14, 2022

Latest Posts

ಮುಖ್ಯಮಂತ್ರಿ  ಯಡಿಯೂರಪ್ಪ ಅವರ ವಿರುದ್ಧದ ಸಮನ್ಸ್ ಗೆ ಹೈಕೋರ್ಟ್ ತಡೆ

ಧಾರವಾಡ: ಕಳೆದ ಉಪಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಗೋಕಾಕ್ ಜೆಎಂಎಫ್‌ಸಿ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಮತ್ತು ವಿಚಾರಣಾ ಪ್ರಕ್ರಿಯಿಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ, ವಿಚಾರಣೆ ಮುಂದೂಡಿದೆ.
ನವೆoಬರ್‌ನಲ್ಲಿ ನಡೆದ ಗೋಕಾಕ್ ಉಪಚುನಾವಣೆಯಲ್ಲಿ ಒಂದು ಸಮುದಾಯ ಪ್ರಚೋದಿಸುವ ರೀತಿ ಭಾಷಣ ಮಾಡಿದ್ದರು. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಬಿಎಸ್‌ವೈ ವಿರುದ್ಧ ನೆ.26, 2019ರಲ್ಲಿ ದೂರು ದಾಖಲಾಗಿತ್ತು. ದೂರು ಸ್ವೀಕರಿಸಿದ ಪ್ರಧಾನ ಜೆಎಂಎಫ್‌ಸಿ ನ್ಯಾಯಾಲಯ ವಿಚಾರಣೆ ನಡೆಸುವಂತೆ ಆದೇಶಿಸಿ ಮಮನ್ಸ್ ಜಾರಿಗೊಳಿಸಿತ್ತು.
ದೂರಿನ ಎಫ್‌ಐಆರ್ ಮತ್ತು ವಿಚಾರಣಾ ಪ್ರಕ್ರಿಯೆ ಅನೂರ್ಜಿತಗೊಳಿಸಲು ಕೋರಿ ಹೈಕೋರ್ಟ್ನಲ್ಲಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ. ಸೂರಜ್ ಗೋವಿಂದರಾಜ್ ಏಕಸದಸ್ಯ ಪೀಠ ವಾದ-ಪ್ರತಿವಾದ ಆಲಿಸಿ ಪ್ರಕರಣದ ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ತಿಳಿಸಿ, ಕಳೆ ನ್ಯಾಯಾಲಯದ ವಿಚಾರಣೆ ಮತ್ತ್ತು ಸಮನ್ಸ್ಗೆ ಮಧ್ಯಂತರ ತಡೆಯಾಜ್ಞೆ ತೀರ್ಪು ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss