ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮುಖ್ಯಮಂತ್ರಿ ಸ್ಥಾನದಿಂದ ಸಿಎಂ ಯಡಿಯೂರಪ್ಪ ಅವರನ್ನು ತೆಗೆಯೋದು ಪಕ್ಕಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ದೆಹಲಿ ಬೆಳವಣಿಗೆ ಬಗ್ಗೆ ನಂಗೆ ಗೊತ್ತಿಲ್ಲ. ಆದ್ರೆ ನಂಗೆ ಮಾಹಿತಿ ಇದೆ. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸೋದು ಪಕ್ಕಾ. ಅದು ಯಾವಾಗ ಅಂತ ಗೊತ್ತಿಲ್ಲ. ದೆಹಲಿಯಿಂದ ಅವರು ಬರುತ್ತಾರೆ, ಅವರನ್ನೇ ಕೇಳಿ ಎಂದು ಹೇಳಿಕೆ ನೀಡಿದ್ದಾರೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿ ಸಿಎಂ ಬಿಎಸ್ವೈ ದೆಹಲಿ ಭೇಟಿ ವಿಚಾರದ ಬಗ್ಗೆ ನಂಗೆ ಮಾಹಿತಿ ಇಲ್ಲ ಎಂದಿದ್ದಾರೆ.