Monday, August 8, 2022

Latest Posts

ಮುಖ್ಯ ಮಂತ್ರಿಗಳ ಸಂಪರ್ಕದಲ್ಲಿದ್ದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಕ್ವಾರಂಟೈನ್

ಬೆಂಗಳೂರು: ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢವಾಗುತ್ತಿದ್ದಂತೆಯೇ ಅವರ ಸಂಪರ್ಕದಲ್ಲಿ ಇದ್ದವರನ್ನೂ ಕ್ವಾರಂಟೈನ್ ಮಾಡಲಾಗಿದೆ. ಅದಂರತೇಯೇ ಮುಖ್ಯಮಂತ್ರಿ ಸಂಪರ್ಕದಲ್ಲಿ ಇದ್ದಿದ್ದರಿಂದ ನೂತನ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಕ್ವಾರಂಟೈನ್ ಒಳಗಾಗಿದ್ದಾರೆ.

ಕಮಲ್ ಪಂತ್ ಶನಿವಾರವಷ್ಟೇ ಅಧಿಕಾರ ಸ್ವೀಕರಿಸಿದ್ದರು. ಮುಖ್ಯಮಂತ್ರಿಯವರಿಗರ ಕೊರೋನಾ ದೃಢ ವಾಗುತ್ತಿದ್ದಂತೆಯೇ ಭಾನುವಾರ ಕಮಲ್ ಪಂತ್ ಅವರನ್ನು ಕ್ವಾರಂಟೈನ್ ಮಾಡಲಾಗಿತ್ತು.

ಏಕೆಂದರೆ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಇವರು ಮುಖ್ಯ ಮಂತ್ರಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದರು. ನಿಯಮದಂತೆ ನಿತ್ಯ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯದ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡುತ್ತಿದ್ದರು. ಹಾಗಾಗಿ ಮುಖ್ಯ ಮಂತ್ರಿ ಸಂಪರ್ಕದಲ್ಲಿ ಇದ್ದಿದ್ದರಿಂದ ಇವರನ್ನು ಕ್ವಾರಂಟೈನ್ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss