ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಜಯಕರ್ನಾಟಕ ಸಂಘಟನೆಯ ಸ್ಥಾಪಕಾಧ್ಯಕ್ಷ ಮುತ್ತಪ್ಪ ರೈ ಸ್ಥಿತಿ ಗಂಭೀರವಾಗಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಿದೆ.
ಬೆಂಗಳೂರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುತ್ತಪ್ಪ ರೈ ಆರೋಗ್ಯದಲ್ಲಿ ಬುಧವಾರ ಸಂಜೆಯ ಬಳಿಕ ಹಠಾತ್ ಏರುಪೇರು ಕಾಣಿಸಿಕೊಂಡಿತ್ತು. ಈ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ಪೂರ್ವ ವಲಯ ಡಿಸಿಪಿ ಶರಣಪ್ಪ ಅವರು, ಮುತ್ತಪ್ಪ ರೈ ಸ್ಥಿತಿ ಚಿಂತಾಜನಕವಾಗಿದ್ದು ನಾಳೆ ಆಸ್ಪತ್ರೆಯ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ಅವರ ನಿಧನದ ಸುದ್ದಿ ಸುಳ್ಳು. ಕಳೆದ ಕೆಲವು ದಿನಗಳಿಂದ ರೈ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.