ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದ ರಾಜಧಾನಿ ಬೆಂಗಳೂರಿನ ರಾಜರಾಜೇಶ್ವರಿ ನಗರದ ವಿಧಾನ ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ಚುನಾವಣೆ ಆಯೋಗದಿಂದ ಘೋಷಣೆಯೊಂದೇ ಬಾಕಿ ಇದೆ.
ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು 1,03,291 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 50,586 ಮತಗಳು ಪಡೆದರೆ, ಜೆಡಿಎಸ್ ಅಭ್ಯರ್ಥಿ ಕೇವಲ 6,592 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ 44,508 ಮತಗಳ ಮುನ್ನಡೆ ಮುನಿರತ್ನ ಕಾಯ್ದುಕೊಂಡಿದ್ದಾರೆ.