Monday, August 8, 2022

Latest Posts

ಕೇಂದ್ರಕ್ಕೆ ಮತ್ತೊಂದು ಜಯ: ಮೂರು ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅಂಕಿತ

ನವದೆಹಲಿ : ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರ ಬೃಹತ್ ಪ್ರತಿಭಟನೆ ಮತ್ತು ಸಂಸತ್ತಿನ ಸದಸ್ಯರ ಭಾರೀ ಗದ್ದಲದ
ನಡುವೆಯೂ ಲೋಕಸಭೆ, ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದ ಮೂರು ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಇಂದು ಸಹಿ ಹಾಕಿದರು.
ರೈತರ ಮತ್ತು ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ- 2020 ಹಾಗೂ ರೈತರ (ಸಬಲೀಕರಣ ಮತ್ತು ರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ವಿಧೇಯಕ-2020 ಕ್ಕೆ ಸಂಸತ್ತಿನಲ್ಲಿ ಅನುಮೋದನೆ ನೀಡಿತ್ತು. ಇದಲ್ಲತ್ತೆ ಮತ್ತೊಂದು ಕೃಷಿ ವಿಧೇಯಕವನ್ನು ಸಂಸತ್ ನಲ್ಲಿ ಅಂಗೀಕರಿಸಲಾಗಿತ್ತು.
ಪ್ರತಿ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಸಂಸತ್ ನಲ್ಲಿ ಅಂಗೀಕರಿಸಲಾಗಿದ್ದಂತ ಮೂರು ಕೃಷಿ ವಿಧೇಯಕಗಳನ್ನು ರಾಷ್ಟ್ರಪತಿ ಅಂಕಿತಕ್ಕೆ ಕೇಂದ್ರ ಸರ್ಕಾರ ಕಳುಹಿಸಿ ಕೊಟ್ಟಿತ್ತು. ಇಂತಹ ಮೂರು ವಿವಾಧಿತ ಕೃಷಿ ವಿಧೇಯಕ ತಿದ್ದುಪಡಿಗೆ ರಾಷ್ಟ್ರಪತಿ ರಾಮಾನಾಥ ಕೋವಿಂದ್ ಸಹಿ ಹಾಕುವ ಮೂಲಕ, ಅಂಕಿತ ಸೂಚಿಸಿದ್ದಾರೆ. ಈ ಮೂಲಕ ವಿವಾದಿತ ಮೂರು ಕೃಷಿ ತಿದ್ದುಪಡಿ ವಿಧೇಯಕಗಳು ಜಾರಿಯಾದಂತೆ ಆಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss