Sunday, June 26, 2022

Latest Posts

ಮೂವರು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು: ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಉಡುಪಿ: ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಒಬ್ಬರು ಬಲಿಯಾಗಿ, 5ನೇ ಕೊರೋನಾ ಪ್ರಕರಣ ದೃಢಪಟ್ಟ ಬೆನ್ನಲ್ಲೇ ಇದೀಗ ಉಡುಪಿಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಬಾಧಿಸಿರುವ ಶಂಕೆ ವ್ಯಕ್ತವಾಗಿದೆ.

ಮಣಿಪಾಲ ಮಾಹೆಯ ವಿದ್ಯಾರ್ಥಿಗಳಲ್ಲಿ ಕೆಮ್ಮು, ಜ್ವರದ ಲಕ್ಷಣಗಳು ಕಂಡು ಬಂದಿವೆ. ಮೂವರು ವಿದ್ಯಾರ್ಥಿಗಳೂ ವಿದೇಶದಿಂದ ಬಂದಿದ್ದಾರೆ. ಅಮೆರಿಕ ಮತ್ತು ಕುವೈಟ್‌ನಿಂದ ಬಂದಿರುವ ಇಬ್ಬರು ವಿದ್ಯಾರ್ಥಿಗಳು ಗುರುವಾರ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಕ್ರವಾರ ಮಲೇಷ್ಯಾದಿಂದ ಬಂದಿರುವ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರಿಗೂ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.

ಇಬ್ಬರು ವಿದ್ಯಾರ್ಥಿಗಳ ಗಂಟಲ ದ್ರವದ ಮಾದರಿಯನ್ನು ಗುರುವಾರವೇ ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಶುಕ್ರವಾರ ದಾಖಲಾದ ರೋಗಿಯ ಗಂಟಲ ದ್ರವದ ಮಾದರಿಯನ್ನೂ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಒಂದೆರಡು ದಿನದಲ್ಲಿ ವೈದ್ಯಕೀಯ ವರದಿ ಬರಲಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss