Wednesday, August 17, 2022

Latest Posts

ಮೆಗಾ ಅದಾಲತ್ ಲಾಭ ಪಡೆದುಕೊಳ್ಳಿ: ಬಿ. ವೆಂಕಟಪ್ಪ

ರಾಮನಗರ : ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು ಮುಂದಿನ ಶನಿವಾರ (ಸೆ. ೧೯) ನಡೆಯುವ ಮೆಗಾ ಇ-ಲೋಕ ಅದಾಲತ್ ನಲ್ಲಿ ಇತ್ಯರ್ಥಗೊಳಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ವೆಂಕಟಪ್ಪ ಅವರು ಸಾರ್ವಜನಿಕರಿಗೆ ತಿಳಿಸಿದ್ದಾರೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಮನಗರ ಜಿಲ್ಲೆಯಾದ್ಯಂತ ಇರುವ ೧೮ ಬೆಂಚ್ ಗಳಲ್ಲಿ ಸೆ. ೧೯ ರಂದು ಮೆಗಾ ಇ-ಲೋಕ ಅದಾಲತ್ ಆಯೋಜಿಸಲಾಗಿದೆ.

ರಾಜಿ ಇಲ್ಲವೆ ಸಂದಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ್ಯ ಪಡಿಸಿಕೊಳ್ಳಲು ಅವಕಾಶವಿದೆ. ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ಸತ್ರ ನ್ಯಾಯಾಧೀಶರು ಕೋರಿದ್ದಾರೆ. ಜಿಲ್ಲೆಯಾದ್ಯಂತ ಏಕ ಕಾಲಕ್ಕೆ ಸೆ. ೧೯ ರಂದು ನಡೆಯುವ ಇ-ಲೋಕ ಅದಾಲತ್ ಗಾಗಿ ಮುಂದಿನ ಶುಕ್ರವಾರದ ವರೆಗೆ (ಸೆ. ೧೮) ಪ್ರಕರಣಗಳನ್ನು ನೊಂದಣಿ ಮಾಡಿಕೊಳ್ಳಲಾಗುತ್ತದೆ. ರಾಮನಗರ ಜಿಲ್ಲಾ ಹಾಗೂ ಎಲ್ಲಾ ಅಧೀನ ನ್ಯಾಯಾಲಯಗಳಲ್ಲಿ ಕಲಾಪವು ಆನ್ ಲೈನ್ ಮೂಲಕವೇ ನಡೆಯಲಿದೆ. ನ್ಯಾಯಾಲಯದ ಕಲಾಪಗಳಲ್ಲಿ ವಕೀಲರು ಖುದ್ದಾಗಿ ಇಲ್ಲವೆ ಆನ್ ಲೈನ್ ಮೂಲಕ ಭಾಗವಹಿಸಬಹುದು. ಅವಶ್ಯಕತೆ ಇದ್ದಲ್ಲಿ ಕಕ್ಷಿದಾರರನ್ನು ಆನ್ ಲೈನ್ ಮೂಲಕ ಸಂಪರ್ಕಿಸಲಾಗುವುದು ಎಂದು ವೆಂಕಟಪ್ಪ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ೩೯,೬೮೬ ಪ್ರಕರಣಗಳು ಬಾಕಿ ಇದೆ. ಇವುಗಳ ಪೈಕಿ ೪,೩೮೪ ಪ್ರಕರಣಗಳನ್ನು ಮೆಗಾ ಲೋಕ ಅದಾಲತ್ ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ಧಾರೆ. ಕೋವಿಡ್ -೧೯ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿ0ದ ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗಿಲ್ಲ.

ಈ ಹಿನ್ನೆಲೆಯಲ್ಲಿ ಶನಿವಾರ ಪ್ರಥಮಬಾರಿಗೆ ಆನ್ ಲೈನ್ ಮೂಲಕ ಸಣ್ಣ ಪುಟ್ಟ ಪ್ರಕರಣಗಳನ್ನು ಇತ್ಯರ್ಥ್ಯ ಪಡಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಎಲ್ಲರಿಗೂ ನ್ಯಾಯ ದೊರಕಿಸಿ ಕೊಡುವ ಉದ್ದೇಶದಿಂದ ದೇಶದಲ್ಲಿಯೇ ಪ್ರಥಮ ಬಾರಿಗೆ ಇ-ಲೋಕ ಅದಾಲತ್ ಗೆ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದ್ಧಾರೆ. ವಿಮಾ ಕಂಪನಿಗಳಿ0ದ ಬರಬೇಕಾದ ಪರಿಹಾರ, ಅಪಘಾತ, ಕಂತು ಕಟ್ಟದಿರುವುದು ಸೇರಿದಂತೆ ಇನ್ನಿತರ ಸಣ್ಣಪುಟ್ಟ ಪ್ರಕರಣಗಳನ್ನು ರಾಜಿ ಇಲ್ಲವೆ ಸಂಧಾನದ ಮೂಲಕ ಬಗೆಹರಿಸಲು ಒತ್ತು ನೀಡಲಾಗುತ್ತಿದೆ. ಹೀಗಾಗಿ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!