spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, September 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಸುಧಾಕರ್

- Advertisement -Nitte

ಹೊಸದಿಗಂತ ವರದಿ ಚಿತ್ರದುರ್ಗ:

ಚಿತ್ರದುರ್ಗದಲ್ಲಿ ಮೆಡಿಕ್ ಕಾಲೇಜಿನ ಜೊತೆಗೆ ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವುದಾಗಿ ವೈದ್ಯಕೀಯ ಶಿಕ್ಷಣ ಹಾಗು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ ಸುಧಾಕರ್ ಭರವಸೆ ನೀಡಿದ್ದಾರೆ.

ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿ ಇಂದು ನೂತನವಾಗಿ ಮೆಡಿಕಲ್ ಸ್ಥಾಪನೆಗೆ ಸ್ಥಳ ಪರಿಶೀಲನೆ ನಡೆಸಿದ ಸಚಿವ ಡಾ.ಕೆ ಸುಧಾಕರ್, ಮೆಡಿಕಲ್ ಕಾಲೇಜಿನ ಜೊತೆಯಲ್ಲೆ ಎಲ್ಲಾ ಮಾದರಿಯ ಅರೆ ವೈದ್ಯಕೀಯ ಕೋರ್ಸ್ ಆರಂಭಕ್ಕೂ ಕ್ರಮ ಕೈಗೊಳ್ಳುತ್ತೇವೆ, ಮುಂದಿನ ೩೦ ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸುವ ಸಲುವಾಗಿ ರಾಜ್ಯ ಸರ್ಕಾರದಿಂದಲೇ ಸಂಪೂರ್ಣ ಅನುಧಾನ ಮಂಜೂರಿಗೆ ಸರ್ಕಾರ ಮಾಡಲಿದ್ದು, ಕೇಂದ್ರ ಸರ್ಕಾರದಿಂದ ಯಾವುದೇ ಅನುಧಾನ ಮಂಜೂರಾಗಿಲ್ಲ ಎಂದರು.

ಚಿತ್ರದುರ್ಗದಲ್ಲಿ ನೂತನ ಮೆಡಿಕಲ್ ಕಾಲೇಜು ಸ್ಥಾಪನೆ ಪ್ರಸ್ಥಾವನೆ ಬಂದಿದ್ದು, ನಿನ್ನೆಯೇ ಅನುಮೋದನೆ ದೊರೆತಿದೆ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪನವರು ಈಗಾಗಲೇ ೫೦ ಕೋಟಿ ಅನುಧಾನ ಮಂಜೂರಿಗೆ ಸಿಎಂ ಆದೇಶ ನೀಡಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಹಾಗು ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಕೊರೊನಾ ಲಸಿಕೆ ಲಭ್ಯತೆಯ ಬಗ್ಗೆ ಮಾತನಾಡಿ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಯಶಸ್ವಿ, ಕ್ಲಿನಿಕಲ್ ಟ್ರಯಲ್ ಯಶಸ್ಸಿನ ಬಗ್ಗೆ ಪ್ರತಿಷ್ಟಿತ ಸಂಸ್ಥೆಗಳು ಸ್ಪಷ್ಟನೆ ನೀಡಿವೆ, ಮಾರ್ಚ್ ಏಪ್ರಿಲ್ ಒಳಗೆ ಕೋವಿಡ್ ಲಸಿಕೆ ದೊರೆಯುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೆಡಿಕಲ್ ಕಾಲೇಜು ಸ್ಥಾಪನೆಗೆ ಸ್ಥಳ ಪರಿಶೀಲನೆ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸ್ಥಳೀಯ ಶಾಸಕರುಗಳಾದ ಜಿಹೆಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಪೂರ್ಣಿಮಾ ಕೆ.ಶ್ರೀನಿವಾಸ್, ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ. ಸಿಇಒ ಟಿ.ಯೋಗೀಶ್, ಜಿಲ್ಲಾ ಸರ್ಜನ್ ಡಾ.ಬಸವರಾಜ್ ಸೇರಿದಂತೆ ರಾಜಕೀಯ ಮುಖಂಡರು, ಅಧಿಕಾರಿಗಳು, ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಸದಸ್ಯರು, ಕನ್ನಡ ಪರ ಸಂಘಟನೆಗಳ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss