ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ತಮಿಳುನಾಡು ಬಿಜೆಪಿಯ ನೂತನ ಅಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ತಮಿಳುನಾಡು ಬಿಜೆಪಿ, ತಮಿಳುನಾಡು ಸರ್ಕಾರದ ಜೊತೆಗೆ ನಿಲ್ಲುತ್ತದೆ ಎಂದಿದ್ದಾರೆ.
ಮೇಕೆದಾಟು ಅಣೆಕಟ್ಟು ವಿಷಯದಲ್ಲಿ ನಾವು ಸಂಪೂರ್ಣ ಸ್ಪಷ್ಟವಾಗಿದ್ದೇವೆ. ಇದರಲ್ಲಿ ನಾವು ರಾಜಕೀಯ ಮಾಡುವುದಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಪಕ್ಷವೇ ಆಡಳಿತದಲ್ಲಿದ್ದರೂ ಸಹ ತಮಿಳುನಾಡು ಬಿಜೆಪಿ ತಮಿಳುನಾಡು, ಜನರು, ರೈತರ ಹಿತರಕ್ಷಣೆಯ ಪರವಾಗಿ ನಿಲ್ಲುತ್ತದೆ.ಈ ವಿಚಾರದಲ್ಲಿ ನಾವು ಸ್ಪಷ್ಟ ನಿಲುವು ಹೊಂದಿದ್ದೇವೆ.ತಮಿಳುನಾಡು ರೈತರು ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನೀರಿನಲ್ಲಿ ತನ್ನ ಪಾಲನ್ನು ಪಡೆಯಲೇಬೇಕೆಂದಿದ್ದಾರೆ.