Monday, July 4, 2022

Latest Posts

ಮೇಡ್ ಇನ್ ಇಂಡಿಯಾ ಲಸಿಕೆಗಳಿಗೆ ಅನುಮೋದನೆ: ಅಮಿತ್ ಶಾ, ಜೆ.ಪಿ. ನಡ್ಡಾ ಶ್ಲಾಘನೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್ -19 ಲಸಿಕೆಗೆ ಡಿಸಿಜಿಐಯಿಂದ ಅನುಮೋದನೆ ಸಿಕ್ಕಿರುವ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ವಿಜ್ಞಾನಿಗಳು ಮತ್ತು ಆರೋಗ್ಯ ಕಾರ್ಯಕರ್ತರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಆತ್ಮನಿರ್ಭರ ಭಾರತದ ಪರಿಕಲ್ಪನೆಯಡಿಯಲ್ಲಿ ಲಸಿಕೆಗಳನ್ನು ತಯಾರಿಸಲು ಪ್ರಧಾನಿ ಮೋದಿಯವರು ನೀಡಿರುವ ಪ್ರೋತ್ಸಾಹ ಅತ್ಯಂತ ಪ್ರಮುಖ ಪಾತ್ರವಹಿಸಿದೆ ಎಂದು ಶಾ ಹೆಮ್ಮೆ ಪಟ್ಟಿದ್ದಾರೆ. ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ ನಮ್ಮ ಅತ್ಯಂತ ಪ್ರತಿಭಾವಂತ ಮತ್ತು ಶ್ರಮಶೀಲ ವಿಜ್ಞಾನಿಗಳಿಗೆ ನಾನು ನಮಸ್ಕರಿಸುತ್ತೇನೆ. ಕೋವಿಡ್​ ಮುಕ್ತ ಭಾರತದತ್ತ ಶ್ರಮಿಸಿದ್ದಕ್ಕಾಗಿ ಮೋದಿ ಜಿ ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನ ಮಂತ್ರಿ ಅವರ ಆತ್ಮನಿರ್ಭರ ಭಾರತದ ದೂರದೃಷ್ಟಿಯ ಫಲದಿಂದ ಮೇಡ್ ಇನ್ ಇಂಡಿಯಾ ಲಸಿಕೆಗಳಿಗೆ ನೀಡಿದ ಅನುಮೋದನೆ ಸಿಕ್ಕಿದೆ. ಸಾಂಕ್ರಾಮಿಕ ಸಮಯದಲ್ಲಿ ಸೇವೆ ಸಲ್ಲಿಸಿದ ವಿಜ್ಞಾನಿಗಳು, ವೈದ್ಯರು, ವೈದ್ಯಕೀಯ ಸಿಬ್ಬಂದಿ, ಭದ್ರತಾ ಸಿಬ್ಬಂದಿ ಮತ್ತು ಎಲ್ಲಾ ಕೊರೊನಾ ವಾರಿಯರ್ಸ್​ಗೆ ಶಾ ಧನ್ಯವಾದ ಎಂದು ಹೇಳಿದರು.

ಇನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ಕೋವಿಡ್​ -19 ರಿಂದ ರಕ್ಷಿಸಲು ಎರಡು ಸ್ಥಳೀಯ ಲಸಿಕೆಗಳನ್ನು ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ ನೀಡಿದೆ. ದೇಶಕ್ಕೆ ಇದೊಂದು ನಿರ್ಣಾಯಕ ಮತ್ತು ಐತಿಹಾಸಿಕ ಕ್ಷಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ದೇಶ ಹೊಸ ಆಯಾಮವನ್ನು ಸ್ಥಾಪಿಸಿದೆ. ಎಲ್ಲಾ ವಿಜ್ಞಾನಿಗಳು ಮತ್ತು ವೈದ್ಯರಿಗೆ ಅನೇಕ ಅಭಿನಂದನೆಗಳು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss