Friday, August 19, 2022

Latest Posts

ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ: ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್ ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ ‘ನಾಯಕ’ರು ಲಾಭ ಮಾಡಿಕೊಳ್ಳುವುದೂ ಬೇಡ‌ ಎಂಬುದಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವ ಅವರು, ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ ಎಂದು ತಿಳಿಸಿದ್ದಾರೆ.

ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ ‘ನಾಯಕ’ರು ಲಾಭ ಮಾಡಿಕೊಳ್ಳುವುದೂ ಬೇಡ‌ ಎಂಬುದಾಗಿ ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ತಳ್ಳಿ ಹಾಕಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!