Wednesday, June 29, 2022

Latest Posts

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಅಭಿವೃದ್ಧಿಗೆ ಚಿಂತನೆ: ಸಚಿವ ನಾರಾಯಣಗೌಡ

ಹೊಸದಿಗಂತ ವರದಿ, ಮೈಸೂರು:

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಅಭಿವೃದ್ಧಿ ಪಡಿಸುವ ಚಿಂತನೆ ನಡೆಸಲಾಗಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದರು.

ಭಾನುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಒಂದೂವರೆ ಸಾವಿರ ಕೋಟಿ ರೂ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಮೈಸೂರಿನಲ್ಲಿ ಸಹ ಅಂತಾರಾಷ್ಟ್ರೀಯ ಕ್ರೀಡಾಂಗಣ ಅಭಿವೃದ್ಧಿ ಪಡಿಸುವ ಚಿಂತನೆ ಇದೆ. ಬೆಂಗಳೂರನ್ನ ಬಿಟ್ಟರೆ ಮೈಸೂರು ಹುಬ್ಬಳ್ಳಿ ಮುಂಚೂಣಿ ನಗರಗಳು. ಪ್ರತಿ ಜಿಲ್ಲೆಗಳಲ್ಲೂ ಕ್ರೀಡಾಂಗಣ ಅಭಿವೃದ್ಧಿ ಪಡಿಸುವ ಕೆಲಸ ಆಗಲಿದೆ. ಪಿಪಿಪಿ ಯೋಜನೆಯಡಿ ಕ್ರೀಡಾಯೋಜನೆಗಳನ್ನ ಕೈಗೆತ್ತಿಕೊಳ್ಳಲಿದ್ದೇವೆ ಎಂದರು.

ಈ ಬಾರಿ ಬಜೆಟ್‌ನಲ್ಲಿ ಕ್ರೀಡಾ ಇಲಾಖೆಗೂ ಸಾಕಷ್ಟು ಅನುದಾನ ಸಿಗಲಿದೆ. ಹಾಸ್ಟೆಲ್ ಗಳು ಸೇರಿದಂತೆ ಕ್ರೀಡಾ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆಗೆ ಪ್ರಯತ್ನಿಸುತ್ತೇನೆ ಎಂದು ನುಡಿದರು. ಮಂಡ್ಯ ಜೆಡಿಎಸ್ ಭದ್ರಕೋಟೆಯಾಗಿ ಉಳಿದಿಲ್ಲ. ಸದ್ಯದ ಪರಿಸ್ಥಿತಿ ನೋಡಿದರೆ ನಿಮಗೆ ಹಾಗೆ ಅನ್ನಿಸುವುದಿಲ್ಲವಾ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಬೆರಳೆಣಿಕೆಯಷ್ಟು ಸ್ಥಾನ ಗೆಲ್ಲುತ್ತಿದ್ದ ಬಿಜೆಪಿ ಗ್ರಾ.ಪಂ ಚುನಾವಣೆಯಲ್ಲಿ 750-800 ಸ್ಥಾನ ಗೆದ್ದಿದೆ. ಇದನ್ನು ನೋಡಿದರೆ ಜಿಲ್ಲೆಯಲ್ಲಿ ಬಿಜೆಪಿ ಶಕ್ತಿ ಗೊತ್ತಾಗುತ್ತಿದೆ. ಕೆಳ ಹಂತದಿAದ ಪಕ್ಷ ಸಂಘಟಿಸುವ ಕೆಲಸ ನಡೆಯುತ್ತಿದೆ. ನಾನು ಕಾಂಗ್ರೆಸ್, ಜೆಡಿಎಸ್ ಪಕ್ಷದ ನಾಯಕರನ್ನು ದೂರುವುದಿಲ್ಲ. ನಮ್ಮ ಪಕ್ಷದ ಬಲವರ್ಧನೆಗೆ ಬೇಕಾದ ಕೆಲಸ ಮಾಡುತ್ತಿದ್ದೇವೆ ಎಂದರು.

ಬಿಜೆಪಿಗೆ ಶಾಸಕ ಎಂ.ಶ್ರೀನಿವಾಸ್ ಸೆಳೆಯುವ ಯತ್ನ ವಿಚಾರವಾಗಿ ಮಾತನಾಡಿ, ನಾವು ಯಾರನ್ನೂ ಸೆಳೆಯುವ ಪ್ರಯತ್ನ ಮಾಡಿಲ್ಲ. ಒಂದಿಬ್ಬರು ಎಂಎಲ್‌ಎಗಳು ಬಿಟ್ಟರೆ, ಉಳಿದವರು ನಮ್ಮ ಜೊತೆಗಿದ್ದಾರೆ. ಬಿಜೆಪಿ ಮುನ್ನಡೆಸಲು ಜೊತೆಯಾಗಿ ಬಂದವರನ್ನು ಚೆನ್ನಾಗಿ ನೋಡಿಕೊಳ್ಳುತ್ತೇವೆ ಎಂದರು.

ಮoಡ್ಯ ಜಿಲ್ಲೆಯಲ್ಲಿ ಸಾಕಷ್ಟು ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಅದನ್ನು ನಾನು ಈಗ ಬಹಿರಂಗ ಮಾಡಲ್ಲ. ಎಲ್ಲವೂ ಒಳ್ಳೆಯದಾದ ನಂತರ ನಿಮ್ಮ ಬಳಿ ಹೇಳುತ್ತೇವೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss