ಮೈಸೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶುಕ್ರವಾರ ಮೈಸೂರಿಗೆ ಭೇಟಿ ನೀಡಿ, ಕೊರೋನಾ ವೈರಸ್ ಸೋಂಕು ಹರಡುವಿಕೆಯ ಹಿನ್ನೆಲೆಯಲ್ಲಿ ಉಂಟಾಗಿರುವ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಅವರು, ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಕೊರೋನಾ ಸೋಂಕಿಗೆ ಪ್ರಮುಖ ಕಾರಣವಾದ ಜ್ಯುಬಿಲೆಂಟ್ ಕಾರ್ಖಾನೆ, ಕಾರ್ಮಿಕರ ಪರಿಸ್ಥಿತಿ, ರೈತರಿಗೆ ಉಂಟಾಗಿರುವ ಸಮಸ್ಯೆ, ಕರ್ನಾಟಕ, ಕೇರಳ ಗಡಿ ವಿಚಾರದ ಬಗ್ಗೆಯೂ ಅಧಿಕಾರಿಗಳ ಜೊತೆ ಚರ್ಚಿಸಿದರು.
ಜಿಲ್ಲಾಧಿಕಾರಿ ಅಭಿರಾಮ್ ಶಂಕರ್, ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಹೆಚ್ಚುವರಿ ಡಿಸಿ ಪೂರ್ಣಿಮಾ, ಹೆಚ್ಚುವರಿ ಎಸ್ಪಿ ಸ್ನೇಹಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.