Monday, July 4, 2022

Latest Posts

ಮೈಸೂರಿನಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನಲೆ: ನಿಯಮ ಪಾಲಿಸದವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಪೊಲೀಸರಿಗೆ ಡಿಸಿಪಿ ಸೂಚನೆ

ಮೈಸೂರು: ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಮೈಸೂರಿನ ಡಿಸಿಪಿ ಡಾ.ಎ.ಎನ್ ಪ್ರಕಾಶ್ ಗೌಡ ಮೈಸೂರು ನಗರ ವ್ಯಾಪ್ತಿಯ ಪೊಲೀಸರಿಗೆ ಸೂಚಿಸಿದ್ದಾರೆ.
ಮೈಸೂರಿನಲ್ಲಿ ಸಾರ್ವಜನಿಕರು, ವ್ಯಾಪಾರ ಸ್ಥಳಗಳು, ತರಕಾರಿ ಮಾರುಕಟ್ಟೆಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುತ್ತಿರುವುದು ಕಂಡು ಬಂದಿದೆ. ಇದರಿಂದ ಕೊರೋನಾ ಸೋಂಕು ಹೆಚ್ಚು ಹರಡುವ ಸಾಧ್ಯತೆಗಳು ಕಂಡು ಬಂದಿವೆ. ಆದ್ದರಿಂದ ಇನ್ನು ಮುಂದೆ ಠಾಣಾಧಿಕಾರಿಗಳು ತಮ್ಮ ಠಾಣಾ ಸರಹದ್ದಿನಲ್ಲಿರುವ ವ್ಯಾಪಾರ ಸ್ಥಳಗಳು ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಗೆ ಮತ್ತು ಅಂಗಡಿಯ ಮಾಲೀಕರುಗಳಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ತಿಳಿಸಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ, ಮಾಸ್ಕ್ ಧರಿಸುವಂತೆ ಸೂಕ್ತ ಮಾರ್ಗದರ್ಶನ ನೀಡಿ, ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ರೀತ್ಯಾ ಕ್ರಮ ಕೈಗೊಳ್ಳಿ. ನಿಮ್ಮ ಠಾಣಾ ಸರಹದ್ದಿನಲ್ಲಿರುವ ಅಂಗಡಿ ಮಾಲ್ ಮತ್ತು ಹೋಟೆಲ್ ಗಳ ಮಾಲೀಕರುಗಳಿಗೂ ಸಹ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನಿರ್ದೇಶನ ನೀಡಿ ಮಾಸ್ಕ್ ಧರಿಸಿದವರಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸುವಂತೆ ಸರ್ಕಾರದ ಆದೇಶಗಳನ್ನು ಪಾಲಿಸುವಂತೆ ಸೂಕ್ತ ಮಾರ್ಗದರ್ಶನ ನೀಡಿ, ಉಲ್ಲಂಘಿಸುವವರ ವಿರುದ್ಧ ಕ್ರಮಿನಲ್ ಮೊಕದ್ದಮೆ ದಾಖಲಿಸಿ ಎಂದು ನಿರ್ದೇಶನ ನೀಡಿದ್ದಾರೆ. ಪಿಐಗಳು ನಿಮ್ಮ ಠಾಣಾ ಸರಹದ್ದಿನಲ್ಲಿ ಗಸ್ತಿನಲ್ಲಿದ್ದು, ಸಾರ್ವಜನಿಕರು ಹೆಚ್ಚು ಗುಂಪು ಸೇರುವ ಸ್ಥಳಗಳು ಮತ್ತು ವ್ಯಾಪಾರ ಸ್ಥಳಗಳಿಗೆ ಭೇಟಿ ನೀಡಿ, ಸರ್ಕಾರದ ಆದೇಶ ಪಾಲಿಸಲಾಗುತ್ತದೆಯೇ ಎಂದು ಪರಿಶೀಲಿಸಿ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಕೊರೋನಾ ಹರಡದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಿ. ಕೈಗೊಂಡ ಕ್ರಮದ ಬಗ್ಗೆ ಪಾಲನಾ ವರದಿ ಸಲ್ಲಿಸಿ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss