Sunday, August 14, 2022

Latest Posts

ಮೈಸೂರಿನಲ್ಲಿ ಜನಸೇವಕ್ ಸಮಾವೇಶ: ಸಿಎಂ ಬಿಎಸ್ ವೈರಿಂದ ಚಾಲನೆ

ಹೊಸದಿಗಂತ ವರದಿ, ಮೈಸೂರು:

ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗಾಗಿ ಜನಸೇವಕ್ ಸಮಾವೇಶವನ್ನು ಜ.11 ರಿಂದ 13ರ ತನಕ ನಡೆಸಲಾಗುವುದು ಎಂದು ಗ್ರಾಮ ಸೇವಕ್ ಸಮಾವೇಶದ ಸಂಚಾಲಕ, ರಾಜ್ಯ ಬಿಜೆಪಿ ಕಾರ್ಯದರ್ಶಿ ಅಶ್ವಥ್ ನಾರಾಯಣ್ ತಿಳಿಸಿದರು.
ಶನಿವಾರ ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಮೈಸೂರಿನ ಕಲಾಮಂದಿರದಲ್ಲಿ ಜ.11 ರಂದು ಬೆಳಗ್ಗೆ 11 ಕ್ಕೆ ಸಮಾಔಎಸ ಆರಂಭವಾಗಲಿದ್ದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಚಾಲನೆ ನೀಡಲಿದ್ದಾರೆ. ಅಂದು ಮಧ್ಯಾಹ್ನ 3ಕ್ಕೆ ಚಾಮರಾಜನಗರದಲ್ಲಿ ಸಮಾವೇಶ ನಡೆಯಲಿದೆ ಎಂದು ಹೇಳಿದರು.
ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಮುಂಬರುವ ಜಿಲ್ಲಾ ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗಾಗಿ ಜನಸೇವಕ್ ಸಮಾವೇಶ ನಡೆಸಲಾಗುವುದು. ಇದಕ್ಕಾಗಿ ಒಟ್ಟು ಐದು ತಂಡಗಳನ್ನು ರಚನೆ ಮಾಡಲಾಗುತ್ತಿದೆ. ಸಂಸದರು, ಶಾಸಕರನ್ನು ಒಳಗೊಂಡAತೆ ಬಿಜೆಪಿ ಯ ಜನಪ್ರತಿನಿಧಿಗಳು, ಪರಾಜಿತ ಅಭ್ಯರ್ಥಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು ಈ ಐದು ತಂಡಗಳಲ್ಲಿರಲಿದ್ದಾರೆ.
ಒಟ್ಟು 30 ಜಿಲ್ಲೆಗಳಲ್ಲಿ ಗ್ರಾಮ ಸೇವಕ್ ಸಮಾವೇಶ ನಡೆಯಲಿದ್ದು, ಪ್ರತಿದಿನ ಎರಡು ಜಿಲ್ಲೆಗಳಲ್ಲಿ ಸಮಾವೇಶ ನಡೆಯಲಿದೆ. ಜ.13 ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ಜನಸೇವಕ್ ಸಮಾವೇಶದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಶಾಸಕ ಎಲ್.ನಾಗೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇAದ್ರ, ಮೈಸೂರು ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಗ್ರಾಮಾಂತರ ಜಿಲ್ಲಾಧ್ಯಕ್ಷ ಮಂಗಳ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss