ಮೈಸೂರು: ಅರಮನೆ ನಗರಿ ಮೈಸೂರು ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 357 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 11,489 ಕ್ಕೇರಿದೆ. ಸಕ್ರಿಯ ಸೋಂಕಿತರು 4112 ಜನರಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನಿಂದ ಗುಣವಾದ 298 ಮಂದಿಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಸೋಂಕಿಗೆ 6 ಜನರು ಬಲಿಯಾಗಿದ್ದು, ಸಾವಿಗೀಡಾದವರ ಸಂಖ್ಯೆ 315 ಕ್ಕೆ ತಲುಪಿದೆ.