ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ಹೊಸದಾಗಿ 374 ಜನರಿಗೆ ಕೊರೋನಾ ಸೋಂಕು ತಗುಲಿದೆ. ಸೋಂಕಿತರ ಸಂಖ್ಯೆ 7685ಕ್ಕೇರಿದೆ. ಸಕ್ರಿಯ ಸೋಂಕಿತರು 3979 ಮಂದಿ ಇದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನಿಂದ ಗುಣವಾದ 258 ಜನರನ್ನು ಆಸ್ಪತ್ರೆಯಿಂದ ಇಂದು ಬಿಡುಗಡೆ ಮಾಡಲಾಯಿತು. ಗುಣವಾದವರ ಸಂಖ್ಯೆ 3466 ಕ್ಕೆ ಏರಿಕೆಯಾಗಿದೆ. ಸೋಂಕಿಗೆ 5 ಜನರು ಬಲಿಯಾಗಿದ್ದು, ಮೃತಪಟ್ಟವರ ಸಂಖ್ಯೆ 240 ಕ್ಕೆ ಮುಟ್ಟಿದೆ.