Wednesday, August 17, 2022

Latest Posts

ಮೈಸೂರಿನಿಂದಲೂ ಬರುತ್ತಿದೆ ಎನ್‌ಡಿಆರ್‌ಎಫ್ ತಂಡ: ರಕ್ಷಣಾ ಕಾರ್ಯಾಚರಣೆಗೆ ಬರಲಿದೆ ಹೆಲಿಕಾಪ್ಟರ್

ಉಡುಪಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯಾದ್ಯಂತ ಹಲವಾರು ತಗ್ಗು ಪ್ರದೇಶಗಳಲ್ಲಿ ಮನೆಗಳು ಆಸ್ತಿ-ಪಾಸ್ತಿ ಮುಳುಗಡೆಯಾಗಿವೆ. ರಕ್ಷಣಾ ಕಾರ್ಯಾಚರಣೆಗೆ ಹೆಚ್ಚಿನ ವಿಪತ್ತು ಪರಿಹಾರ ಕಾರ್ಯಪಡೆಯನ್ನು ಕಳುಹಿಸಿಕೊಡುವಂತೆ ರಾಜ್ಯ ಸರಕಾರವನ್ನು ಸಂಸದೆ ಶೋಭಾ ಕರಂದ್ಲಾಜೆ ಕೋರಿದ್ದಾರೆ.

ಇನ್ನೂ ಮಳೆ ನಿಲ್ಲದಿರುವುದರಿಂದ ಉಡುಪಿಯಲ್ಲಿ ಇನ್ನಷ್ಟು ಪ್ರವಾಹದ ಭೀತಿಯಿರುವ ಕಾರಣದಿಂದ ಕಾರ್ಯಾಚರಣೆ ಚುರುಕುಗೊಳಿಸಲು ಹೆಚ್ಚಿನ ನೆರವು ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರೊಂದಿಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ಮನವಿ ಮಾಡಿದ್ದಾರೆ.

ಈಗಾಗಲೇ ಮಂಗಳೂರಿನಿಂದ ಒಂದು ಎನ್‌ಡಿಆರ್‌ಎಫ್ ತಂಡ ಬಂದಿದ್ದು, ಅಪಾಯದ ಪ್ರದೇಶದಲ್ಲಿರುವ ಜನರ ಸಹಾಯ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿದೆ.

ಇನ್ನೊಂದು 20 ಜನರನ್ನೊಳಗೊಂಡ ಎನ್‌ಡಿಆರ್‌ಎಫ್ ತಂಡವನ್ನು ಮೈಸೂರಿನಿಂದ ಇದೀಗಲೇ ಕಳುಹಿಸಿಕೊಡಲಾಗಿದೆ. ಅಲ್ಲದೇ ಸಂಸದರ ಮನವಿಯ ಮೇರೆಗೆ ರಕ್ಷಣಾ ಕಾರ್ಯಕ್ಕೆ ಹೆಲಿಕಾಪ್ಟರ್ ಗಳು ಕೆಲವೇ ತಾಸುಗಳಲ್ಲಿ ಕಳುಹಿಸಿಕೊಡಲಾಗುತ್ತಿದೆ. ಬೆಂಗಳೂರು ಹಾಗೂ ಕಾರವಾರ ಕೇಂದ್ರದಿಂದ ಹೆಲಿಕಾಪ್ಟರ್ ಗಳನ್ನು ರಕ್ಷಣಾ ಕಾರ್ಯಕ್ಕಾಗಿ ಕಳುಹಿಸಿ ಕಳುಹಿಸಿಕೊಡುವುದಾಗಿ ಮುಖ್ಯ ಕಾರ್ಯದರ್ಶಿಯವರು ತಿಳಿಸಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ.

ಈ ಹೆಲಿಕಾಪ್ಟರ್ ಗಳು ಕೆಲವೇ ತಾಸುಗಳಲ್ಲಿ ಉಡುಪಿಯಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯದಲ್ಲಿ ಭಾಗಿಯಾಗಲಿವೆ ಎಂದು ಸಂಸದೆ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ಕುರಿತು ಉಡುಪಿ ಜಿಲ್ಲಾಧಿಕಾರಿಗಳೊಂದಿಗೆ ಸಂಸದೆ ಶೋಭಾ ಕರಂದ್ಲಾಜೆಯವರು ಚರ್ಚಿಸಿ ಅಗತ್ಯದ ಪರಿಹಾರ ಕಾರ್ಯಗಳನ್ನು ತಕ್ಷಣ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!