ಮೈಸೂರು: ನೀವು ಮೈಸೂರಿನಲ್ಲಿರುವ ವಿಶ್ವವಿಖ್ಯಾತ ಅಂಬಾ ವಿಲಾಸ ಅರಮನೆ ನೋಡಬೇಕಾದರೆ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಬೇಕು, ಅದರ ವರದಿ ನೆಗೆಟಿವ್ ಬಂದರೆ ಮಾತ್ರ ಅರಮನೆ ನೋಡಲು ಅವಕಾಶ.
ಹೌದು ಅರಮನೆ ನಗರಿ ಮೈಸೂರಿನಲ್ಲಿ ಕೊರೋನಾ ವೈರಾಣು ಸೋಂಕು ಹರಡುವಿಕೆ ನಿಯಂತ್ರಿಸುವುದಕ್ಕಾಗಿ ಮೈಸೂರಿನ ಅಂಬಾ ವಿಲಾಸ ಅರಮನೆ ನೋಡುಲು ಹೋಗುವ ಪ್ರವಾಸಿಗರಿಗೂ ಕೊರೋನಾ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಇನ್ಮುಂದು ಅರಮನೆ ಪ್ರವೇಶಕ್ಕೂ ಮುನ್ನ ಕೊರೋನಾ ಟೆಸ್ಟ್ ಕಡ್ಡಾಯವಾಗಿ ಮಾಡಿಸಬೇಕಾಗಿದೆ.
ಕೊರೊನಾ ಟೆಸ್ಟ್ ಗಾಗಿ ಅರಮನೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಪ್ರವಾಸಿಗರಿಗೂ ಸ್ಥಳದಲ್ಲೇ ಕೊರೋನಾ ಟೆಸ್ಟ್ ಮಾಡಲಾಗುತ್ತಿದೆ. ಐದಕ್ಕೂ ಹೆಚ್ಚು ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಪರೀಕ್ಷೆ ಮಾಡುತ್ತಿದ್ದು, ವರದಿ ನೆಗಟಿವ್ ಬಂದರೆ ಮಾತ್ರ ಅರಮನೆ ವೀಕ್ಷಣೆಗೆ ಅವಕಾಶ ನೀಡಲಾಗುತ್ತಿದೆ.
ತಾಂತ್ರಿಕ ಸಲಹಾ ಸಮಿತಿ ಪ್ರಕಾರ ಮೈಸೂರು ದಸರಾದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಕೊರೋನಾ ಟೆಸ್ಟ್ ಮಾಡಲಾಗಿತ್ತು. ಅರಮನೆ ಸಿಬ್ಬಂದಿ, ಗಜಪಡೆಯ ಮಾವುತರು, ಕಾವಾಡಿಗಳಿಗೂ ಕೊರೋನಾ ಪರೀಕ್ಷೆ ಮಾಡಲಾಗಿತ್ತು. ಇದೀಗ ಪ್ರವಾಸಿಗರಿಗೂ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.