ಹೊಸದಿಗಂತ ವರದಿ,ಮೈಸೂರು:
ಅರಮನೆ ನಗರಿ ಮೈಸೂರು ನಗರದ ಕೆಲವು ಪ್ರದೇಶಗಳಲ್ಲಿ ಪಟಾಕಿ ಹಚ್ಚುವುದು, ಸಿಡಿಸುವುದಕ್ಕೆ ನಿಷೇಧ ಹೇರಲಾಗಿದೆ.
ಹಿರಿಯ ನಾಗರೀಕರು, ಅಸಹಾಯಕರು, ಅಸ್ವಸ್ಥರು ಹಾಗೂ ಪ್ರಾಣಿಪಕ್ಷಿಗಳ ಆರೋಗ್ಯ ಮತ್ತು ರಕ್ಷಣೆಯ ಹಿತದೃಷ್ಟಿಯಿಂದ ಮೈಸೂರು ನಗರ ಕಮೀಷನರೇಟ್‌ನ ವ್ಯಾಪ್ತಿಯಲ್ಲಿ ಕೆಲವು ಪ್ರದೇಶಗಳನ್ನು ದೀಪಾವಳಿ ಹಬ್ಬದ ಅಂಗವಾಗಿ ನಿಶಬ್ದ ವಲಯಗಳನ್ನಾಗಿ ಘೋಷಿಸಲಾಗಿದೆ.
ಮೈಸೂರು ನಗರದ ಕಮೀಷನರೇಟ್ ವ್ಯಾಪ್ತಿಯಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, ಕಾರಂಜಿ ಕೆರೆ ಪ್ರದೇಶ, ಲಿಂಗಾಬುದಿಕೆರೆ ಪ್ರದೇಶ, ಸಾರ್ವಜನಿಕ ಉದ್ಯಾನವನಗಳು, ಆಸ್ಪತ್ರೆ ಹಾಗೂ ನರ್ಸಿಂಗ್ ಹೋಂಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳ 100 ಮೀಟರ್ ಸುತ್ತಳತೆ ಪ್ರದೇಶವನ್ನು ನವೆಂಬರ್ 11 ರ ಬೆಳಿಗ್ಗೆ 6 ಗಂಟೆಯಿAದ ನವೆಂಬರ್ 14 ರ ಮಧ್ಯರಾತ್ರಿ 12 ಗಂಟೆಯವರೆಗೆೆ ನಿಶಬ್ಧವಲಯ ಎಂದು ಘೋಷಿಸಲಾಗಿದೆ.
ನಿಶಬ್ಧವಲಯಗಳಲ್ಲಿ ಯಾವುದೇ ರೀತಿಯ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ರಮೇಶ್ ಆದೇಶ ಹೊರಡಿಸಿದ್ದಾರೆ.