ಮೈಸೂರು: ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಗಾಯಕ ವಿಜಯಪ್ರಕಾಶ್ ಅವರು, ಶುಕ್ರವಾರ
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡ ಶಕ್ತಿ ದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದರು.
ಸಾಂಸ್ಕೃತಿಕ ಹಾಗೂ ಪಾರಂಪರಿಕ ಉಡುಗೆತೊಟ್ಟ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಅವರು, ಶಕ್ತಿ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಅವರಿಗೆ ಜಿ ಕನ್ನಡ ವಾಹಿನಿಯ ಮುಖ್ಯಸ್ಥರಾದ ರಾಘವೇಂದ್ರ ಹುಣಸೂರ್ ಸಾಥ್ ನೀಡಿದರು.
ಅರ್ಜುನ್ ಜನ್ಯ ಅವರು ಮೈಸೂರಿನ ದಟ್ಟಗಳ್ಳಿಯಲ್ಲಿರುವ ತಮ್ಮ ವಿಲ್ಲಾದಲ್ಲಿದ್ದಾಗ ಲಘು ಹೃದಯಾಘಾತಕ್ಕೆ ಒಳಗಾಗಿ, ಅಪೋಲೋ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದು, ಗುಣವಾದ ಬಳಿಕ ಬಿಡುಗಡೆಯಾಗಿದ್ದರು. ಈ ಹಿನ್ನಲೆಯಲ್ಲಿ ಅವರು ನಾಡ ಶಕ್ತಿ ದೇವತೆಯ ದರ್ಶನ ಪಡೆದರು.