Sunday, June 26, 2022

Latest Posts

ಮೈಸೂರಿನ ಜೆ.ಕೆ.ಟೈರ್ಸ್ ಕಾರ್ಖಾನೆಯ ೪೦ಕ್ಕೂ ಹೆಚ್ಚು ಕಾರ್ಮಿಕರಿಗೆ ಕೊರೋನಾ ಸೋಂಕು ದೃಢ: ಮೂರು ದಿನಗಳ ಕಾಲ ಕಾರ್ಖಾನೆ ಬಂದ್

ಮೈಸೂರು: ಮೈಸೂರಿನ ಜೆ.ಕೆ.ಟೈರ್ಸ್ ಕಾರ್ಖಾನೆಯಲ್ಲಿ ೪೦ಕ್ಕೂ ಹೆಚ್ಚು ಕಾರ್ಮಿಕರಿಗೆ ಕೊರೋನಾ ಸೋಂಕು ಅಂಟಿರುವುದು ಪರೀಕ್ಷಾ ವರದಿಯಿಂದ ದೃಢಪಟ್ಟಿದ್ದು, ಮೈಸೂರಿನಲ್ಲಿ ಬೃಹತ್ ಪ್ರಮಾಣದಲ್ಲಿ ಸೋಂಕು ಮತ್ತಷ್ಟು ಹರಡುವ ಆತಂಕವನ್ನುAಟು ಮಾಡಿದೆ.

ಈ ಕಾರ್ಖಾನೆಯಲ್ಲಿ ಕೆಲ ಕಾರ್ಮಿಕರಿಗೆ ಜುಲೈ ೧೦ ರಂದು ಕೊರೋನಾ ಸೋಂಕಿರುವುದು ಕಂಡು ಬಂದಿತ್ತು. ಆದರೆ ಕಂಪನಿಯ ಆಡಳಿತ ಮಂಡಳಿಯವರು ಕಾರ್ಖಾನೆಯನ್ನು ಬಂದ್ ಮಾಡಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರಲಿಲ್ಲ ಎನ್ನಲಾಗಿದೆ. ಸೋಂಕಿತರು ಚಿಕಿತ್ಸೆಗೆಂದು ದಾಖಲಾಗಿದ್ದರು. ಅವರ ಕೆಲಸದ ಹಿನ್ನಲೆ, ಪ್ರಯಾಣದ ಮಾಹಿತಿಯನ್ನು ತಿಳಿದ ಆರೋಗ್ಯಾಧಿಕಾರಿಗಳು, ಮೂರು ದಿನಗಳ ಕಾಲ ಕಾರ್ಖಾನೆಯನ್ನು ಬಂದ್ ಮಾಡಿಸಿ, ಸ್ಯಾನಿಟೇಷನ್ ಮಾಡಿಸಿದ್ದಾರೆ.

ಮೈಸೂರಿನ ಹೆಬ್ಬಾಳ, ಮೇಟಗಳ್ಳಿಯಲ್ಲಿರುವ ಜೆ.ಕೆ. ಟೈರ್ಸ್ ಕಾರ್ಖಾನೆಯ ಮೂರು ಘಟಕಗಳುಗಳಲ್ಲಿ ಸುಮಾರು ೩ ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಕಾರ್ಖಾನೆಯ ಎಲ್ಲಾ ಕಾರ್ಮಿಕರಿಗೂ ಕೋವಿಡ್ ಟೆಸ್ಟ್ ಮಾಡಿಸುವಂತೆ ಸೂಚಿಸಲಾಗಿದ್ದು, ಎರಡು ಆಸ್ಪತ್ರೆಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಇಲ್ಲಿಯ ತನಕ ೪೦ ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಸೋಂಕಿತರ ಸಂಪರ್ಕಕ್ಕೆ ಬಂದ ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್ ಸಿದ್ಧತೆ ನಡೆದಿದೆ. ಅಲ್ಲದೆ ಸೋಂಕಿತರ ಪ್ರಯಾಣದ ಹಿನ್ನಲೆ, ಯರ‍್ಯಾರು ಸಂಪರ್ಕಕ್ಕೆ ಬಂದಿದ್ದಾರೆ ಎಂಬ ಮಾಹಿತಿಯನ್ನು ಪಡೆದುಕೊಂಡು, ಅವರನ್ನು ಪತ್ತೆ ಹಚ್ಚಿ, ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ. ಅಲ್ಲದೆ ಅವರನ್ನು ಕ್ವಾರಂಟೈನ್ ಮಾಡಲಾಗುತ್ತದೆ.

ನಂಜನಗೂಡಿನ ಜುಬಿಲಿಯಂಟ್ ಔರ್ಷಧ ಕಾರ್ಖಾನೆಯ ಕಾರ್ಮಿಕರಲ್ಲಿ ಕೊರೋನಾ ಸೋಂಕು ಹರಡಿದ್ದ ಪ್ರಕರಣದ ಬಳಿಕ ಈಗ ಜೆ.ಕೆ.ಟೈರ್ಸ್ ಕಾರ್ಖಾನೆಯ ಕಾರ್ಖಾನೆಯ ಕಾರ್ಮಿಕರಿಗೆ ಸೋಂಕು ಹರಡಿರುವುದು ಜನರಲ್ಲಿ, ಆರೋಗ್ಯ ಇಲಾಖೆಯ ಅಧಿಕಾರಿಗಳಲ್ಲಿ ಆತಂಕವನ್ನುAಟು ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss