Saturday, August 13, 2022

Latest Posts

ಮೈಸೂರಿನ ಮೇಟಗಳ್ಳಿಯಲ್ಲಿ 15ನೇ ಶತಮಾನಕ್ಕೆ ಸೇರಿದ ಮೂರು ವೀರಗಲ್ಲುಗಳು ಪತ್ತೆ

ಮೈಸೂರು:  ಮೈಸೂರಿನ ಮೇಟಗಳ್ಳಿಯಲ್ಲಿ ಮೂರು ವೀರಗಲ್ಲುಗಳು ಪತ್ತೆಯಾಗಿವೆ. ಇವು ಸುಮಾರು ೧೫ ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ವಿಜಯನಗರ ಸಾಮ್ರಾಜ್ಯದ ಕಾಲದ್ದು ಎಂದು ಹೇಳಲಾಗುತ್ತಿದೆ.

ಗ್ರಾಮದ ಸ್ವಚ್ಛತೆಗೆ ಮುಂದಾದ ವೇಳೆ ಗ್ರಾಮಸ್ಥರ ಕಣ್ಣಿಗೆ ಈ ವೀರಗಲ್ಲುಗಳು ಬಿದ್ದಿದೆ. ಮಣ್ಣಿನಲ್ಲಿ ಒಂದು ವೀರಗಲ್ಲು ಹುದುಗಿದ್ದು ಗಿಡಗಂಟಿಗಳ ಮಧ್ಯೆ ಎರಡು ವೀರಗಲ್ಲುಗಳು ಪತ್ತೆಯಾಗಿದೆ. ಹೋರಾಟದಲ್ಲಿ ಮಡಿದ ವೀರರನ್ನು ಸ್ಮರಿಸುವ ಸಂಕೇತವಾಗಿ ನಿರ್ಮಿಸಿರುವ ವೀರಗಲ್ಲುಗಳು ಎಂದು ಹೇಳಲಾಗಿದೆ.

ವೀರಗಲ್ಲಿನಲ್ಲಿ ಮೂರು ಪಟ್ಟಿ ಇದೆ. ಕೆಳಗಿನ ಪಟ್ಟಿಕೆಯಲ್ಲಿ ವೀರರು ಹೋರಾಡುತ್ತಿರುವ ದೃಶ್ಯ ಕೆತ್ತನೆಯಾಗಿದೆ. ಮಧ್ಯದ ಪಟ್ಟಿಕೆಯಲ್ಲಿ ಹೋರಾಟಗಾರರು ಮಡಿದ ನಂತರ ಅಪ್ಸರೆಯರು ಸ್ವರ್ಗಕ್ಕೆ ಕೊಂಡೊಯ್ಯುವ ದೃಶ್ಯ ಕೆತ್ತನೆಯಾಗಿದೆ. ಮೇಲಿನ ಪಟ್ಟಿಕೆಯಲ್ಲಿ ಹೋರಾಟದಲ್ಲಿ ಮಡಿದವರಿಗೆ ಸ್ವರ್ಗ ಪ್ರಾಪ್ತಿಯಾಗಿ ಸೂರ್ಯ ಚಂದ್ರರು ಇರುವವರೆಗೆ ಅಜರಾಮರವಾಗಿ ಇರುವ ದೃಶ್ಯ ಕೆತ್ತನೆಯಾಗಿದೆ. ಮೂರು ದೃಶ್ಯಗಳನ್ನ ಮೂರು ಪಟ್ಟಿಕೆಯಲ್ಲಿ ಕೆತ್ತನೆ ಮಾಡಿರುವ ಕಲಾವಿದನ ಕೈಚಳಕ ಇತಿಹಾಸವನ್ನು ನೆನಪಿಸುವಂತೆ ಮಾಡುತ್ತದೆ.

ವಿಷಯ ತಿಳಿಯುತ್ತಿದ್ದಂತೆ ಪುರಾತತ್ವ ಇಲಾಖೆ ಅಧಿಕಾರಿಗಳಾದ ಸುನಿಲ್ ಕುಮಾರ್ ಹಾಗೂ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೀರಗಲ್ಲುಗಳನ್ನು ಸಂರಕ್ಷಿಸಲು ಪುರಾತತ್ವ ಇಲಾಖೆ ನಿರ್ಧರಿಸಿದೆ. ಮುಂದಿನ ಪೀಳಿಗೆಗೆ ಗತಕಾಲದ ಇತಿಹಾಸ ವನ್ನು ಪರಿಚಯಿಸುವ ಉದ್ದೇಶ ಪುರಾತತ್ವ ಇಲಾಖೆಗೆ ಇದೆ. ಆದರೆ ಗ್ರಾಮಸ್ಥರೇ ಇವುಗಳನ್ನು ಸಂರಕ್ಷಿಸಲು ನಿರ್ಧರಿಸಿದ್ದಾರೆ.

ಇದರಿಂದಾಗಿ ಪುರಾತತ್ವ ಇಲಾಖೆ ವೀರಗಲ್ಲುಗಳನ್ನು ಸದ್ಯಕ್ಕೆ ತನ್ನ ವಶಕ್ಕೆ ತೆಗೆದುಕೊಳ್ಳುವ ನಿರ್ಧಾರ ಕೈ ಬಿಟ್ಟಿದೆ. ವಿಜಯನಗರ ಸಾಮ್ರಾಜ್ಯಕ್ಕೂ ಮೇಟಗಳ್ಳಿ ಗ್ರಾಮಕ್ಕೂ ಸಂಬAಧ ಇರುವ ಬಗ್ಗೆ ಶಾಸನಗಳಲ್ಲಿ ಶೋಧನೆಗೆ ಮುಂದಾಗಲು ಇಲಾಖೆ ನಿರ್ಧಾರ ಕೈಗೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss