ಮೈಸೂರಿನ ಲ್ಲಿ ಮತ್ತೆ ಇಬ್ಬರಿಗೆ ಕೊರೋನಾ ಸೋಂಕು, ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆ 

0
87

ಮೈಸೂರು: ಮಹಾಮಾರಿ ಕೊರೋನಾ ಸೋಂಕು ಮತ್ತೆ ಇಬ್ಬರಲ್ಲಿ ಇರುವುದು ಪರೀಕ್ಷಾ ವರದಿಯಿಂದ ದೃಢಪಟ್ಟಿದೆ.

ಮೈಸೂರಿನ ನಂಜನಗೂಡಿನಲ್ಲಿರುವ ಜುಬಿಲಿಯಂಟ್ ಔಷಧ ಕಂಪನಿಯ ಮತ್ತೀಬ್ಬರು ನೌಕರರಲ್ಲಿ ಕೊರೋನಾ ಸೋಂಕು ಇರುವುದು ಖಚಿತವಾಗಿದೆ, ಇದರಿಂದಾಗಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 14 ಕ್ಕೆ ಏರಿದೆ.

ಅಲ್ಲದೆ ಇದೇ ಕಾರ್ಖಾನೆಯ ಮತ್ತೆ ಐದು ಮಂದಿಯಲ್ಲಿ ಸೋಂಕಿನ ಲಕ್ಷಣ ಕಂಡು ಬಂದಿದೆ. ಇದರಿಂದಾಗಿ ಮತ್ತಷ್ಟು ಆತಂಕ ಹೆಚ್ಚಾಗಿದೆ.  ಪಂಚ ಮಹಾರಥೋತ್ಸವ ಮುಂದೂಡಿಕೆ: ನಂಜನಗೂಡಿನಲ್ಲಿ ಕೊರೋನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಏಪ್ರಿಲ್ 5ರಂದು ನಡೆಯಬೇಕಾಗಿದ್ದ ಪಂಚ ಮಹಾರಥೋತ್ಸವವನ್ನು ಜಿಲ್ಲಾಡಳಿತ ರದ್ದುಗೊಳಿಸಿ ಆದೇಶ ಹೊರಡಿಸಿದೆ

LEAVE A REPLY

Please enter your comment!
Please enter your name here