Thursday, July 7, 2022

Latest Posts

ಮೈಸೂರಿನ ವಸ್ತುಪ್ರದರ್ಶನ ಪ್ರಾಧಿಕಾರಕ್ಕೆ ಡಿಸಿಎಂ ಅಶ್ವಥ್ ನಾರಾಯಣರಿಂದ ಅನುದಾನ ನೀಡುವ ಭರವಸೆ

ಹೊಸ ದಿಗಂತ ವರದಿ, ಮೈಸೂರು:

ಕೋವಿಡ್ ಕಾರಣದಿಂದಾಗಿ ಸಂಕಷ್ಟಗೀಡಾಗಿರುವ ಮೈಸೂರಿನಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಸರ್ಕಾರದಿಂದ ಅನುದಾನ ನೀಡುವುದಾಗಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡರಿಗೆ ಭರವಸೆ ನೀಡಿದರು.
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ ಅವರು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಕೋವಿಡ್ ಕಾರಣದಿಂದಾಗಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಲಿಲ್ಲ, ದಸರಾದಲ್ಲಿ ವಸ್ತು ಪ್ರದರ್ಶನವನ್ನೂ ಆಯೋಜಿಸಲಾಗಲಿಲ್ಲ. ಇದರಿಂದಾಗಿ ಪ್ರಾಧಿಕಾರವು ಆರ್ಥಿಕ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಅಲ್ಲದೇ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಬೇಕಿದೆ. ಇದಕ್ಕೆ ಹಣಕಾಸಿನ ನೆರವು ಸರ್ಕಾರದಿಂದ ಅಗತ್ಯವಿದೆ. ಹಾಗಾಗಿ ಪ್ರಾಧಿಕಾರಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಿಕೊಡಬೇಕೆಂದು ಮನವಿ ಮಾಡಿದರು. ಅಲ್ಲದೇ ಪ್ರಾಧಿಕಾರವು ಕೈಗೊಳ್ಳುವ ಉದ್ದೇಶಿಸಿರುವ ಹಲವು ಯೋಜನೆ, ಕಾರ್ಯಕ್ರಮಗಳಿಗೆ ಅನುಮತಿ ನೀಡಬೇಕೆಂದು ಸಚಿವರನ್ನು ಕೋರಿದರು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು, ಪ್ರಾಧಿಕಾರಕ್ಕೆ ಏನೇನು ಅಗತ್ಯವಿದೆ ಎಂಬುದರ ಕುರಿತಂತೆ ಪ್ರಸ್ತಾವನೆಯನ್ನು ಕೊಡಿ, ಅದನ್ನು ಬಜೆಟ್‌ನಲ್ಲಿ ಸೇರಿಸಿ, ಘೋಷಣೆ ಮಾಡಿಸಿ, ಅಗತ್ಯ ನೆರವು ನೀಡಲು ಕ್ರಮವಹಿಸುವುದಾಗಿ ಭರವಸೆ ನೀಡಿದರು. ಇದೇ ವೇಳೆ ಸಚಿವರನ್ನು ಹೇಮಂತ್ ಕುಮಾರ್ ಗೌಡರು ಸನ್ಮಾನಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss