Thursday, July 7, 2022

Latest Posts

ಮೈಸೂರಿನ 4 ಸಾಧಕರೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವುದು ಹೆಮ್ಮೆಯ ವಿಷಯ: ಟಿ.ಎಸ್.ಶ್ರೀವತ್ಸ

ಮೈಸೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ರಾಜ್ಯದ ೬೫ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಸಂತಸದ ವಿಷಯವಾಗಿದೆ. ಮೈಸೂರಿನ ನಾಲ್ವರು ಸಾಧಕರೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವುದು ಹೆಮ್ಮೆಯ ವಿಷಯವಾಗಿದೆ. ಮೈಸೂರು ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಎಸ್. ಶ್ರೀವತ್ಸ ತಿಳಿಸಿದ್ದಾರೆ.
ಮೈಸೂರಿನ ಸಾಧ್ವಿ ಪತ್ರಿಕೆಯ ಸಂಪಾದಕ ಸಿ.ಮಹೇಶ್ವರನ್ ರವರು, ಶಿಕ್ಷಣ ಕ್ಷೇತ್ರದ ಡಾ. ಪುಟ್ಟಸಿದ್ದಯ್ಯ, ಆಯುರ್ವೇದ ವೈದ್ಯ ಡಾ. ಚಂದ್ರಶೇಖರ್ ಹಾಗೂ ಶಿಲ್ಪಕಲೆ ವಿಭಾಗದಲ್ಲಿ ಜನಾರ್ದನ ಮೂರ್ತಿ ಅವರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಅರಸಿ ಬಂದಿರುವುದು ನಿಜಕ್ಕೂ ಅರ್ಥಪೂರ್ಣವಾಗಿದೆ. ಅದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರಿಗೆ ಜನತೆಯ ಪರವಾಗಿ ಕೃತಜ್ಞತೆ ಹೇಳ ಬಯಸುವೆ ಎಂದಿದ್ದಾರೆ. ಯೋಗ ಮತ್ತು ಆಯುರ್ವೇದ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಡಾ.ಚಂದ್ರಶೇಖರ ಅವರು, ಮೈಸೂರು ನಗರದ ಕೃಷ್ಬರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾಗಿದ್ದಾಗ ನಾನು ಪ್ರಧಾನಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ಅವರ ಕಾರ್ಯವೈಖರಿ, ಶಿಸ್ತು ಮತ್ತು ಸಾಮಾಜಿಕ ಬದ್ದತೆ ಮಾದರಿಯಾಗಿದೆ. ಇನ್ನೂ ಪತ್ರಿಕಾ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಮಹೇಶ್ವರನ್ ಅವರ ಮಾರ್ಗದರ್ಶನ ನಮಗೆ ಸಹಕಾರಿಯಾಗಿದೆ. ಸಹೋದರರ ಬಾಂಧವ್ಯ ಹೊಂದಿದ್ದಾರೆ ಎಂದು ಬಣ್ಣಿಸಿದ್ದಾರೆ.
ಇವರ ಸಾಧನೆಯು ಇತರರಿಗೂ ಸ್ಫೂರ್ತಿಯಾಗಲಿ ಹಾಗೂ ಪ್ರಶಸ್ತಿಗೆ ಭಾಜನರಾಗಿರುವ ಗಣ್ಯಮಾನ್ಯರಿಂದ ನಾಡಿಗೆ ಇನ್ನಷ್ಟು ಸೇವೆ ದೊರೆಯಲಿ. ಆ ಮೂಲಕ ಈಗಿನ ಹಾಗೂ ಮುಂದಿನ ಪೀಳಿಗೆಯವರಿಗೆ ಉತ್ತಮ ಮಾರ್ಗದರ್ಶನ ದೊರೆಯುವಂತಾಗಲಿ ಎಂದು ಆಶಿಸುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss