Thursday, June 30, 2022

Latest Posts

ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್ ಸುಬ್ರಹ್ಮಣ್ಯ ವಿರುದ್ಧ ತನಿಖೆಗೆ ಜಿಲ್ಲಾಧಿಕಾರಿ ಆದೇಶ

ಮೈಸೂರು: ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ವಿರುದ್ಧ ತನಿಖೆ ನಡೆಸಲು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಟಿ.ಎಸ್ ಸುಬ್ರಹ್ಮಣ್ಯ ಅವರ ಸೇವೆಯಲ್ಲಿ ನಡೆದಿರುವ ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಕಳೆದ ೯ ದಿನಗಳಿಂದ ದಲಿತ ಸಂಘರ್ಷ ಸಮಿತಿವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು.
ಕಳೆದ ೯ ದಿನಗಳಿಂದ ಜಿಲ್ಲಾಧಿಕಾರಿ ಕಛೇರಿ ಬಳಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ತಮ್ಮ ಮನವಿಗೆ ಸ್ಪಂದಿಸದಿದ್ದರೆ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದರು.
ಇದೀಗ ಪ್ರತಿಭಟನಾಕಾರರ ಹೋರಾಟಕ್ಕೆ ಮಣಿದಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಟಿ.ಎಸ್ ಸುಬ್ರಹ್ಮಣ್ಯ ವಿರುದ್ದ ತನಿಖೆಗೆ ಆದೇಶಿಸಿದ್ದಾರೆ. ತನಿಖಾ ಆದೇಶ ಪ್ರತಿ ನೀಡಿದ ನಂತರ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದಿದ್ದಾರೆ. ತಮ್ಮ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಸ್ಥಳ ತೆರವು ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss