ಮೈಸೂರು: ಕೋವಿಡ್-೧೯ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ಹಾಗೂ ಉತ್ತನಹಳ್ಳಿಯ ಶ್ರಿ ಜ್ವಾಲಾತ್ರಿಪುರ ಸುಂದರಮ್ಮಣಿ ದೇವಾಲಗಳಲ್ಲಿ ಅಷಾಢ ಶುಕ್ರವಾರಗಳಂದು ಹಾಗೂ ಪ್ರಮುಖ ದಿನಗಳಂದು ಸಾರ್ವಜನಿಕರಿಗೆ ದೇವರ ದರ್ಶನವನ್ನು ನಿಷೇಧಿಸಲು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶಿಸಿದ್ದಾರೆ.
ಕೊರೋನಾ ವೈರಸ್ ಹರಡದಂತೆ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯ ಹಾಗೂ ಉತ್ತನಹಳ್ಳಿಯ ಜ್ವಾಲಾತ್ರಿಪುರ ಸುಂದರಮ್ಮಣಿ ದೇವಾಲಯಗಳಲ್ಲಿ ಆಷಾಢ ಶುಕ್ರವಾರಗಳಂದು ಹಾಗೂ ಜುಲೈ ೧೩ ರಂದು ಇರುವ ಅಮ್ಮನವರ ಜನ್ಮೋತ್ಸವ ದಂದು ಹಾಗೂ ಜುಲೈ ೧೪ ರಂದು ಸಾರ್ವಜನಿಕರ ದೇವಾಲಯ ಪ್ರವೇಶವನ್ನು ನಿಷೇಧಿಸಿದೆ. ಜೊತೆಗೆ ಶನಿವಾರ ಮತ್ತು ಭಾನುವಾರ ಬೆಟ್ಟಕ್ಕೆ ಗ್ರಾಮಸ್ಥರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಪ್ರವೇಶ ನಿಷೇಧವಿರುವ ದಿನಗಳಂದು ಸಾರ್ವಜನಿಕರ ವಾಹನ ಮತ್ತು ಖಾಸಗಿ ವಾಹನಗಳನ್ನು ಹಾಗೂ ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ಭಕ್ತರು ಬರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.