ಮೈಸೂರು: ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇತ್ತೀಚೆಗೆ ಎಸ್ಪಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಕೊರೋನಾ ಸೋಂಕಿರುವುದು ದೃಢಪಟ್ಟಿತ್ತು. ಆ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಸೋಮವಾರ ರಿಷ್ಯಂತ್ ಅವರು ಸ್ವಾಬ್ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಪರೀಕ್ಷೆಯ ವರದಿಯಲ್ಲಿ ಎಸ್ಪಿ ಸಿ.ಬಿ ರಿಷ್ಯಂತ್ ಅವರಿಗೂ ಸೋಂಕು ಇರುವುದು ದೃಢಪಟ್ಟಿದೆ. ಆದರೆ ಅವರಿಗೆ ಯಾವುದೇ ಸೋಂಕಿನ ಲಕ್ಷಣಗಳು ಕಂಡು ಬಂದಿರಲಿಲ್ಲ. ಸೋಂಕಿರುವುದು ಗೊತ್ತಾಗುತ್ತಿದ್ದಂತೆ ಹೋಂ ಕ್ವಾರಂಟೈನ್ಗೆ ಒಳಗಾಗಿರುವ ರಿಷ್ಯಂತ್ ಅವರು, ಮನೆಯಲ್ಲಿಯೇ ಸೋಂಕಿಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅಲ್ಲದೇ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದಾರೆ.