ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಮಹಾಮಾರಿ ಕೊರೋನಾ ವೈರಾಣು ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ, ಕಾವಾ ಅಲುಮ್ನಿ ಅಸೋಶಿಯೇಶನ್ ವತಿಯಿಂದ ಶನಿವಾರ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು.
ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ಮಾಸ್ಕ್ ಧರಿಸದೆ ಸಂಚರಿಸುತ್ತಿದ್ದ ವಾಹನಗಳ ಸವಾರರು ಹಾಗೂ ಸಾರ್ವಜನಿಕರನ್ನು ತಡೆದು, ಕೊರೋನಾ ವೈರಸ್ ಹರಡುವಿಕೆ ತಡೆಯಲು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿರುವ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಡಲಾಯಿತು. ಉಚಿತವಾಗಿ ಉತ್ತಮ ಗುಣಮಟ್ಟದ ೫೦೦ ಮಾಸ್ಕ್ ಗಳನ್ನು ವಿತರಿಸಲಾಯಿತು. ಅಲ್ಲದೆ ಕೊರೋನಾ ವಾರಿಯರ್ಸ್ ಪೊಲೀಸರಿಗೆ ೫೦ಕ್ಕು ಹೆಚ್ಚು ಮಾಸ್ಕ್ ಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಚಂದ್ರಶೇಖರ್ , ನಮ್ಮ ಅಸೋಸಿಯೇಷನ್ ಮೊದಲ ಕಾರ್ಯಕ್ರಮವಾಗಿ ಸಾರ್ವಜನಿಕರಿಗೆ ಮಾಸ್ಕ್ ವಿತರಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲುಲಾಗುವುದು ಎಂದು ಹೇಳಿದರು.
ಈ ಸಂದರ್ಭ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷೆ, ಚಾಂದಿನಿ, ಕಾರ್ಯದರ್ಶಿಸೂರ್ಯ, ಸಹಕಾರ್ಯದರ್ಶಿ ಅನಿಲ್, ಖಜಾಂಚಿ ರಾಥೋಡ್, ಸದಸ್ಯ ರೇವಣ್ಣ ಮತ್ತಿತರರು ಹಾಜರಿದ್ದರು.