ಮೈಸೂರು: ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್ ಅವರು ಸೋಮವಾರ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
ಸದ್ಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ರಾಜೀವ್ ಗೆ ಮತ್ತೊಂದು ಪಟ್ಟ ದೊರೆತಿದೆ. ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಹೆಚ್ ವಿ ರಾಜೀವ್ ಸತತ ನಾಲ್ಕನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ ಹೆಚ್ ವಿ ರಾಜೀವ್ ಹಾಗೂ ನಿರ್ದೇಶಕರನ್ನು ಮಾಜಿ ಸಚಿವ ಜಿ.ಟಿ. ದೇವೇಗೌಡ ಹಾಗೂ ಸುನೀತಾ ವೀರಪ್ಪಗೌಡ ಅವರು ಅಭಿನಂದಿಸಿದರು.