Tuesday, October 27, 2020
Tuesday, October 27, 2020

Latest Posts

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ನ.1ಕ್ಕೆ ದಸರಾದ ಖರ್ಚು-ವೆಚ್ಚ ಲೆಕ್ಕ ಕೊಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ನಡೆದ ಮೈಸೂರು ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...

ಮೈಸೂರು ದಸರಾ ಸಂಭ್ರಮ: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವ ಸಂಬoಧ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶನಿವಾರ ಸಂಜೆ ಚಾಲನೆ ನೀಡಲಾಯಿತು.
ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವರಾದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಅದ್ದೂರಿಯಾಗಿ ಆಚರಿಸಬೇಕಿದ್ದ ಮೈಸೂರು ದಸರಾವನ್ನು ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸುತ್ತಿದ್ದೇವೆ. ಇದಕ್ಕೆ ಸಾರ್ವಜನಿಕರ ಸಹಕಾರ ಸಹ ಮುಖ್ಯವಾಗಿದ್ದು, ಜನರು ವರ್ಚುವಲ್ ಮೂಲಕ ದಸರಾ ಕಾರ್ಯಕ್ರಮವನ್ನು ಮನೆಯಲ್ಲೇ ಕುಳಿತು ವೀಕ್ಷಿಸಬೇಕು. ಜೊತೆಗೆ ಕಟ್ಟುನಿಟ್ಟಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಮೈಸೂರು ದಸರಾವನ್ನು ಸಾಂಸ್ಕೃತಿಕವಾಗಿ ಹಾಗೂ ಸಂಪ್ರದಾಯಬದ್ಧವಾಗಿ ಆಚರಿಸಲಾಗುತ್ತಿದೆ. ಜೊತೆಗೆ ವರ್ಚುವಲ್ ವ್ಯವಸ್ಥೆ ಮಾಡಿದ್ದು, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಚಾಮುಂಡಿಬೆಟ್ಟ ಹಾಗೂ ಅರಮನೆ ವೇದಿಕೆಗೆ ಮಾತ್ರ ಸೀಮಿತಗೊಳಿಸಲಾಗಿದೆ. ಕೊರೋನಾ ಆತ್ಕದ ಹಿನ್ನೆಲೆಯಲ್ಲಿ ಜನತೆಯ ಆರೋಗ್ಯವೂ ಮುಖ್ಯವಾಗಿದ್ದು, ಜನತೆ ಮನೆಯಲ್ಲೇ ಕುಳಿತು ಕಾರ್ಯಕ್ರಮವನ್ನು ವೀಕ್ಷಿಸಬೇಕಾಗಿ ಕೋರುತ್ತೇನೆ ಎಂದು ತಿಳಿಸಿದರು.
ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ
ಕಾರ್ಯಕ್ರಮದಲ್ಲಿ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಂಗೀತ ಲೋಕದ ಸಾಧಕರಾದ ಪಂಡಿತ್ ವಿನಾಯಕ ತೊರವಿ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಂಡಿತ್ ವಿನಾಯಕ ತೊರವಿ, ಸಾಹಿತ್ಯ, ಕಲೆ, ಸಂಸ್ಕೃತಿ ಉಳಿವಿಗೆ ಕರ್ನಾಟಕ ಶ್ರಮಿಸುವಷ್ಟು ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ. ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು, ಅದೂ ಧಾರವಾಡದಲ್ಲಿ ಹುಟ್ಟಬೇಕು ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ೧ ಲಕ್ಷ ರೂ.
ಪ್ರಶಸ್ತಿ ಪ್ರಧಾನದಲ್ಲಿ ನನಗೆ ಬಂದ ೫ ಲಕ್ಷ ರೂಪಾಯಿಯಲ್ಲಿ ಒಂದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುತ್ತೇನೆ. ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಗೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಇದು ಪ್ರತಿವರ್ಷದ ಸಮಸ್ಯೆಯಾಗುತ್ತಿದೆ. ಈ ನಿಟ್ಟಿನಲ್ಲಿ ಅಲ್ಲಿನ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕಿದೆ. ಇದಕ್ಕಾಗಿ ನಾನು ೧ ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುತ್ತಿದ್ದೇನೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಮೇಯರ್ ತಸ್ನೀಂ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ನ.1ಕ್ಕೆ ದಸರಾದ ಖರ್ಚು-ವೆಚ್ಚ ಲೆಕ್ಕ ಕೊಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ನಡೆದ ಮೈಸೂರು ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...

ಭಾರತ-ಅಮೆರಿಕ| ಉಭಯ ರಾಷ್ಟ್ರಗಳ ಸಂಬಂಧ ಗಟ್ಟಿಯಾಗಿದೆ: ವಿದೇಶಾಂಗ ಸಚಿವ ಎಸ್. ಜಯಶಂಕರ್

ಹೊಸದಿಲ್ಲಿ: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮತ್ತಷ್ಟು ಸದೃಢ ಮತ್ತು ಸ್ಥಿರವಾಗಿ ಬೆಳೆದಿದೆ ಎಂದು ವಿದೇಶಾಂಗ ಸಚಿವ ಎಸ್. ಜೈ ಶಂಕರ್ ತಿಳಿಸಿದ್ದಾರೆ. ಚೀನಾ ಹಾಗೂ ಭಾರತದ ಗಡಿ ಸಂಘರ್ಷದ ನಡುವೆ...

Don't Miss

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ನ.1ಕ್ಕೆ ದಸರಾದ ಖರ್ಚು-ವೆಚ್ಚ ಲೆಕ್ಕ ಕೊಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ನಡೆದ ಮೈಸೂರು ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...
error: Content is protected !!