Sunday, March 7, 2021

Latest Posts

ಮೈಸೂರು ನಗರಪಾಲಿಕೆಯ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಸುಳಿವು ನೀಡಿದ ಹೆಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ವರದಿ, ಮೈಸೂರು:

ಮೈಸೂರು ಮಹಾನಗರಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಬುಧವಾರ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯುವ ಸುಳಿವನ್ನು ಜೆಡಿಎಸ್‌ನ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೀಡಿದ್ದಾರೆ.
ಮಂಗಳವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಜೆಡಿಎಸ್‌ನ ನಗರಪಾಲಿಕೆಯ ಸದಸ್ಯರ ಸಭೆಯ ನಡೆಸಿದ ಬಳಿಕ, ನಗರಪಾಲಿಕೆಯ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಕಾಂಗ್ರೆಸ್‌ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೆಡಿಎಸ್ ಒಂದು ಪಕ್ಷವೇ ಅಲ್ಲ ಅಂತಾರೆ. ನಮ್ಮ ಪಕ್ಷದ ಬಗ್ಗೆ ತುಚ್ಚವಾಗಿ ಮಾತನಾಡವವರ ಜೊತೆ ಯಾಕೇ ಮೈತ್ರಿ ಮಾಡಿಕೊಳ್ಳಬೇಕು. ಈ ಹಿಂದೆ ಮೈತ್ರಿ ಆದಾಗ ದೆಹಲಿ ಮಟ್ಟದ ನಾಯಕರು ಮಾತುಕತೆ ನಡೆಸಿದ್ದರು. ಈಗ ನಿಮ್ಮ ಸಹಕಾರ ಬೇಕೆಂದು ಈವರೆಗೂ ಮೇಲ್ಮಟ್ಟದ ಕಾಂಗ್ರೆಸ್ ನಾಯಕರು ಚರ್ಚೆ ಮಾಡಿಲ್ಲ. ಸಣ್ಣಪುಟ್ಟವರು ಮಾತನಾಡಿದರೆ ಪ್ರಯೋಜನ ಇಲ್ಲ, ಬಿಜೆಪಿ ನಾಯಕರು ಸಂಪರ್ಕ ಮಾಡಿರುವುದು ನಿಜ. ಖುದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ದೂರವಾಣಿ ಮೂಲಕ ಮಾತನಾಡಿದ್ದಾರೆ.
ಮೈಸೂರು ಪಾಲಿಕೆ ಮೈತ್ರಿ ಇಡೀ ರಾಜ್ಯಕ್ಕೆ ಸಂದೇಶ ಕೊಡುತ್ತೆ. ಮುಂದಿನ 2023 ಕ್ಕೆ ಜೆಡಿಎಸ್‌ನ ನಿಲುವು ಏನೆಂದು ಚಾಮುಂಡೇಶ್ವರಿ ಸನ್ನಿಧಿಯಿಂದಲೇ ರವಾನೆ ಆಗುತ್ತೆ ಎಂದು ತಿಳಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss