Sunday, June 26, 2022

Latest Posts

ಮೈಸೂರು| ನಗರಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ: ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಸಾಧ್ಯತೆ:

ಹೊಸ ದಿಗಂತ ವರದಿ, ಮೈಸೂರು:

ಮೈಸೂರು ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ವಿಶ್ವಾಸವಿದೆ ಎಂದು ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ಎಲ್.ನಾಗೇಂದ್ರ ತಿಳಿಸಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಗರಪಾಲಿಕೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವ ಮೈತ್ರಿ ವಿಚಾರದಲ್ಲಿ ನಾವು ಹಿಂದೆ ಬಿದ್ದಿಲ್ಲ. ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆಯಾಗೋ ವಿಶ್ವಾಸವಿದೆ. ನಮ್ಮ ಪಕ್ಷದ ಮುಖಂಡರು ಮತ್ತು ಜಿಲ್ಲಾ ಉಸ್ತುವಾರಿಗಳು ಜೊತೆ ಚರ್ಚೆ ಮಾಡ್ತೇವೆ. ಈ ವಿಚಾರವಾಗಿ ಸದ್ಯ ಯಾವುದೇ ಮಾತುಕತೆ ಆಗಿಲ್ಲ ಎಂದರು.

ಬಿಜೆಪಿಯಿAದ ಈ ಬಾರಿ ಮೊದಲಬಾರಿಗೆ ನಗರಪಾಲಿಕೆಯಲ್ಲಿ ಮೇಯರ್ ಮಾಡೋ ಅವಕಾಶ ಇದೆ. ಈ ವಿಚಾರವಾಗಿ ಸಿಎಂ ಜೊತೆ ಯಾವುದೇ ಮಾತುಕತೆ ನಡೆಸಿಲ್ಲ. ಮುಖ್ಯಮಂತ್ರಿಗಳು ಈ ಬಗ್ಗೆ ಜಿಲ್ಲಾ ಮಂತ್ರಿಗಳಿಗೆ ನಿರ್ದೇಶನ ನೀಡಲಿದ್ದಾರೆ. ಅದರಂತೆ ಮುಂದಿನ ನಿರ್ಧಾರಗಳನ್ನ ಜಿಲ್ಲಾ ಮಂತ್ರಿಗಳು ಮಾಡಲಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss