Wednesday, August 17, 2022

Latest Posts

ಮೈಸೂರು| ನದಿಗೆ 1.50 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಬಿಡುಗಡೆ: ಪ್ರವಾಹ ಮತ್ತಷ್ಟು ಹೆಚ್ಚುವ ಆತಂಕ

ಮೈಸೂರು: ಕೇರಳದ ವೈನಾಡು, ಮಡಿಕೇರಿ ಹಾಗೂ ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಕುಂಭದ್ರೋಣ ಮಳೆ ಸುರಿಯುತ್ತಿರುವ ಕಾರಣ, ಕೆ.ಆರ್.ಎಸ್, ಕಬಿನಿ, ನುಗು, ತಾರಕ ಜಲಾಶಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಇದೀಗ ಈ ಜಲಾಶಯಗಳಿಗೆ ೧.೫೦ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಹೊರ ಬಿಡುತ್ತಿರುವ ಕಾರಣ, ಮತ್ತಷ್ಟು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ನದಿ ಪಾತ್ರದ ಗ್ರಾಮಗಳಿಗೆ ನೀರು ನುಗ್ಗಿ ಮುಳುಗಡೆಯಾಗುವ ಆತಂಕ ಇದೀಗ ಎದುರಾಗಿದೆ.

ಯಾವ್ಯಾವ ಜಲಾಶಯದಿಂದ ಎಷ್ಟೇಷ್ಟು ನೀರು ಬಿಡುಗಡೆ: ಕೆ.ಆರ್.ಎಸ್ ಜಲಾಶಯಕ್ಕೆ ೭೭,೮೪೮ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ನದಿಗೆ ೭೩,೧೧೧ ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ೬೭,೭೦೯ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ನದಿಗೆ ೭೦,೬೦೦ ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ನುಗು ಜಲಾಶಯಕ್ಕೆ ೭೭೫೯ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನದಿಗೆ ೧೦,೦೪೨ ಕ್ಯೂಸೆಕ್ ನೀರು ಬಿಡಲಾಗುತ್ತಿದೆ.

ನದಿ ಪಾತ್ರದ ಜನರಲ್ಲಿ ಆತಂಕ: ಕಾವೇರಿ ಹಾಗೂ ಕಪಿಲಾ ನದಿಗಳು ಉಕ್ಕಿ ಹರಿಯುತ್ತಿರುವ ಕಾರಣ ಮೈಸೂರು ಜಿಲ್ಲೆಯ ತಿ.ನರಸೀಪುರ ಹಾಗೂ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹಲವು ಗ್ರಾಮಗಳಲ್ಲಿ ನೆರೆ ಭೀತಿಯುಂಟಾಗಿದೆ. ಗ್ರಾಮಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. ನದಿ ಪಾತ್ರದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲು ತಾಲೂಕು ಆಡಳಿತಗಳು ಕ್ರಮವಹಿಸಿವೆ. ಅಲ್ಲದೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗುತ್ತಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!