spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮೈಸೂರು| ನಾಲ್ವರು ದುಷ್ಕರ್ಮಿಗಳಿಂದ ವ್ಯಕ್ತಿಯ ಹತ್ಯೆ

- Advertisement -Nitte

ಮೈಸೂರು: ವ್ಯಕ್ತಿಯೊಬ್ಬರನ್ನು ನಾಲ್ವರು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಬುಧವಾರ ಮೈಸೂರಿನ ವಿಜಯನಗರ ೪ ನೇ ಹಂತದಲ್ಲಿ ನಡೆದಿದೆ.
ಆರ್ಥಿಕ್ ದೇವರಾಜ್ ಕೊಲೆಯಾದವ. ಈತ ಹೆಬ್ಬಾಳು ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಖಾಸಗಿ ಕಂಪನಿಯೊAದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚೆಗೆ ಕಂಪನಿಯ ಮುಖ್ಯಸ್ಥರು ಮತ್ತು ಆರ್ಥಿಕ್ ನಡುವೆ ಗಲಾಟೆ ನಡೆದಿತ್ತು. ಆರ್ಥಿಕ್ ಅವರನ್ನು ಕೆಲಸದಿಂದ ತೆಗೆಯಲಾಗಿತ್ತು. ಇಂದು ವಿಜಯ ನಗರ ನಾಲ್ಕನೇ ಹಂತದಲ್ಲಿ ಆರ್ಥಿಕ್ ಬರುತ್ತಿದ್ದಾಗ ಬುಲೆಟ್ ನಲ್ಲಿ ಬಂದ ದುಷ್ಕರ್ಮಿಗಳು ಗಂಭೀರವಾಗಿ ಹಲ್ಲೆ ನಡೆಸಿದ್ದರು. ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಆರ್ಥಿಕ್ ನ್ನು ನೋಡಿದ ಸಾರ್ವಜನಿಕರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ವಿಜಯನಗರ ಪೊಲೀಸ್ ಠಾಣಾ ಇನ್ಸಪೆಕ್ಟರ್ ಬಾಲಕೃಷ್ಣ, ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ಆಗಮಿಸಿ ಆರ್ಥಿಕ್ ನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಿಸದೇ ಆರ್ಥಿಕ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss