ಹೊಸದಿಗಂತ ವರದಿ,ಮೈಸೂರು:
ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ ನ್ಯಾಯಾಲಯದ ನಿವೃತ್ತ ಅಮೀನ್ ಎನ್.ಬಿ.ಶಿವಣ್ಣ(86) ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ನಿಧನರಾದರು.
ಮೃತರು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಂ.ಎಸ್.ಬಸವಣ್ಣ(ಅನುರಾಗ್ ಬಸವರಾಜು) ಸೇರಿದಂತೆ ಮೂವರು ಪುತ್ರರು ಹಾಗೂ ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ಸಂಜೆ ವಿದ್ಯಾರಣ್ಯಪುರಂನಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ. ಮೃತರ ಆತ್ಮಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಮೈಸೂರು ಜಿಲ್ಲಾ ಪತ್ರಿಕಾ ಛಾಯಾಗ್ರಾಹಕರ ಬಳಗ ಶಾಂತಿಕೋರಿದೆ