Thursday, August 11, 2022

Latest Posts

ಮೈಸೂರು ಪೊಲೀಸ್ ಆಯುಕ್ತ, ಎಸಿಪಿಗೆ ಕೊರೋನಾ ಸೋಂಕು ದೃಢ

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಹೋರಾಟ ನಡೆಸುತ್ತಿರುವ ಮುಖ್ಯಸ್ಥರಿಗೆನೇ ಸೋಂಕು ವಕ್ಕರಿಸುತ್ತಿದೆ. ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್‌ಗೆ ಸೋಂಕು ತಗುಲಿದ ಬೆನ್ನಲ್ಲೇ ಇದೀಗ ಸೋಂಕು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತರಿಗೂ ವಕ್ಕರಿಸಿದೆ.
ಮೈಸೂರು ಜಿಲ್ಲಾ ಎಸ್ಪಿ ರಿಷ್ಯಂತ್‌ರ ಪ್ರಾಥಮಿಕ ಸಂಪಕವನ್ನು ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಹೊಂದಿದ್ದರು. ಈ ಹಿನ್ನಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದ ಅವರು, ತಮ್ಮ ಗಂಟಲು ಮಾದರಿಯನ್ನು ನೀಡಿದ್ದರು. ಇದೀಗ ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಪೊಲೀಸ್ ಆಯುಕ್ತರ ಜೊತೆ ಎನ್. ಆರ್ ವಿಭಾಗದ ಎಸಿಪಿ ಶಿವಶಂಕರ್ ಅವರಿಗೂ ಕೊರೋನಾ ಸೋಂಕು ತಗುಲಿರುವುದು ಇನ್ನು ಸೋಂಕು ದೃಢಪಟ್ಟ ಹಿನ್ನೆಲೆ ಪೊಲೀಸ್ ಆಯುಕ್ತ ಚಂದ್ರಗುಪ್ತ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಎಸಿಪಿ ಶಿವಶಂಕರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss