ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮೈಸೂರು| ಪ್ರವಾಸಿಗರ ನಿರ್ಬಂಧ ಹಿಂಪಡೆಯಲಾಗಿದೆ: ಜಿಲ್ಲಾಧಿಕಾರಿ

ಮೈಸೂರು: ಕೋವಿಡ್-19 ವೈರಾಣು ಹರಡದಂತೆ ಮುಂಜಾಗ್ರತ ವಹಿಸುವ ಸಂಬಂಧ ಹೆಚ್.ಡಿ.ಕೋಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹೋಟೆಲ್, ಹೋಂ ಸ್ಟೇ, ರೆಸಾರ್ಟ್, ಲಾಡ್ಜ್, ವಸತಿ ಗೃಹಗಳಿಗೆ ಪ್ರವಾಸ ಮಾಡುವುದು ಹಾಗೂ ಪ್ರವಾಸಿಗರು ಆಗಮಿಸದಂತೆ ನಿರ್ಬಂದಿಸಿದ್ದ ಆದೇಶವನ್ನು ಜುಲೈ 24 ರಂದು ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.
ಸರ್ಕಾರದ ಆದೇಶದಲ್ಲಿ ರಾಜ್ಯದ ಕಂಟೈನ್‍ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಚಟುವಟಿಕೆಗಳ ಪುನರ್ ಆರಂಭಕ್ಕೆ ಮತ್ತು ಕಂಟೈನ್‍ಮೆಂಟ್ ವಲಯಗಳಲ್ಲಿ ಲಾಕ್‍ಡೌನ್ ವಿಸ್ತರಿಸಲು ಅನುಮತಿ ನೀಡಲಾಗಿದೆ. ಅದರಂತೆ ಕರ್ನಾಟಕ ಸಾಂಕ್ರಾಮಿಕ ರೋಗಗಳು ಕೋವಿಡ್-19 ರೆಗ್ಯೂಲೇಷನ್ಸ್-2020 ನಿಯಮ 12 ರಲ್ಲಿ ಹಾಗೂ disaster management act 2005 ಕಲಂ 12 ರಲ್ಲಿ ಕಲಂ 30(2) ಮತ್ತು 34 ಅಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರವಾಸಿಗರು ಆಗಮಿಸದಂತೆ ನಿರ್ಬಂದಿಸಿದ್ದ ಆದೇಶವನ್ನು ಜುಲೈ 24 ರಂದು ಹಿಂಪಡೆಯಲಾಗಿದ್ದು, ಈ ಆದೇಶವು ಜುಲೈ 25 ರಿಂದ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss