Sunday, August 14, 2022

Latest Posts

ಮೈಸೂರು| ಬಯಸಿದ ಲೈಫ್ ಸಿಗಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಯುವಕ!

ಮೈಸೂರು: ತಾನು ಬಯಸಿದ ಲೈಫ್ ಸಿಗಲಿಲ್ಲ ಎಂದು ಬೇಸರಗೊಂಡ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಕೆಸರೆ ನಿವಾಸಿ ಶಿವಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಾತ. ಬಿಬಿಎಂ ವಿದ್ಯಾಭ್ಯಾಸ ಮುಗಿಸಿದ್ದ ಈತ ಖಾಸಗಿ ಕಂಪನಿಯೊOದರಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಕುವೆಂಪುನಗರದ ಎಸ್‌ಬಿಎಂ ಕಾಲೋನಿಯ ಮನೆಯೊಂದರಲ್ಲಿ ರೂಂ ಮಾಡಿಕೊಂಡಿದ್ದ ಈತನಿಗೆ ಕೊರೋನಾ ವೈರಾಣು ಹರಡುವಿಕೆ ಹಿನ್ನಲೆಯಲ್ಲಿ ಮನೆಯಿಂದಲೇ ಕೆಲಸ ನಿರ್ವಹಿಸಲು ಕಂಪನಿಯವರು ಸೂಚಿಸಿದ್ದರು. ಆದರೆ ತಾನು ಬಯಸಿದ ಲೈಫ್ ಸಿಗಲಿಲ್ಲ ಎಂದು ಬೇಸರಗೊಂಡ ಈತ ರೂಂನಲ್ಲಿಯೇ ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕುವೆಂಪು ನಗರ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss