Friday, August 19, 2022

Latest Posts

ಮೈಸೂರು: ಭೂಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ಹಿಂತೆಗೆದುಕೊಳ್ಳಲು ಆಗ್ರಹಿಸಿ ರೈತರಿಂದ ಅರೆಬೆತ್ತಲೆ ಚಳುವಳಿ

ಮೈಸೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂಸುಧಾರಣೆ ತಿದ್ದುಪಡಿ ಕಾಯ್ದೆ ರೈತರಿಗೆ ಮರಣ ಶಾಸನವಾಗಿರುವ ಕಾರಣ ಕೂಡಲೇ ಈ ಕಾಯ್ದೆಯನ್ನು ಹಿಂತೆಗೆದುಕೊಳ್ಳಬೇಕೆAದು ಆಗ್ರಹಿಸಿ ರೈತರು ಶನಿವಾರ ಅರಬೆತ್ತಲೆ ಪ್ರತಿಭಟನೆ ನಡೆಸಿದರು.
ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಅರಬೆತ್ತಲೆಯಾಗಿ ಕೆಲಕಾಲ ಧರಣಿ ನಡೆಸಿ, ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.

ಭೂಸುಧಾರಣೆ ತಿದ್ದುಪಡಿಕಾಯ್ದೆಯು ಬಂಡವಾಳ ಶಾಹಿಗಳ ಪರವಾಗಿದ್ದು, ರಿಯಲ್ ಎಸ್ಟೇಟ್ ಮಾಫೀಯಾಗೆ ಸರ್ಕಾರ ಮಣಿದಿದೆ. ಈ ತಿದ್ದುಪಡಿ ಕಾಯ್ದೆಯಿಂದ ರೈತರು ತಮ್ಮ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ. ಈ ಕಾಯ್ದೆಯ ಜಾರಿಯಿಂದ ಜಮೀನ್‌ದಾರಿ ಪದ್ಧತಿಯನ್ನು ಮತ್ತೆ ಜಾರಿಗೆ ತಂದಾಗುತ್ತಿದೆ. ಹಾಗಾಗಿ ಈ ಕಾಯ್ದೆಯಿಂದಾಗಿ ರೈತ ಕುಟುಂಬಗಳು ಬೀದಿಗೆ ಬೀಳಲಿವೆ. ಕೃಷಿ ಭೂಮಿಗಳು ಬಂಡವಾಳ ಶಾಹಿಗಳ ಕೈಗೆ ಸಿಲುಕಿ ನರಳಲಿದೆ. ಹಾಗಾಗಿ ನಮ್ಮೂರ ಭೂಮಿ ನಮಗಿರಲಿ, ಅನ್ಯರಿಗಲ್ಲ, ಉಳುವವರಿಗೆ ಭೂಮಿಯೇ ಹೊರತು, ಉಳ್ಳವವರಿಗಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದವತಿಯಿAದ ನಡೆದ ಈ ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಅತ್ತಹಳ್ಳಿ ದೇವರಾಜ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!