Wednesday, June 29, 2022

Latest Posts

ಮೈಸೂರು: ಭ್ರಷ್ಟಾಚಾರ ವಿರುದ್ಧ‌ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು: ಮೈಸೂರಿನ ಲೋಕಾಯುಕ್ತ ಇಲಾಖೆ ವತಿಯಿಂದ ಅ. 27 ರಿಂದ ನ.5 ರವರೆಗೆ ಭ್ರಷ್ಟಾಚಾರ ವಿರುದ್ಧ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ “ಜಾಗೃತಿ ಅರಿವು ಸಪ್ತಾಹ-2020” ಕಾರ್ಯಕ್ರಮಕ್ಕೆ ಹೆಚ್ಚುವರಿ ನ್ಯಾಯಾಧೀಶರಾದ ಜಯಶ್ರೀ ಅವರು ಶುಕ್ರವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವ್ಯವಸ್ಥೆಯಲ್ಲಿ ನೈತಿಕ ಕರ್ತವ್ಯ ಪ್ರಜ್ಞೆ ಹಾಗೂ ಆದರ್ಶಗಳನ್ನು ಭ್ರಷ್ಟಾಚಾರ ಎಂಬ ಪೆಡಂಭೂತ ಹಾಳು ಮಾಡುತ್ತಿದೆ. ಅಧಿಕಾರಿಗಳು ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಪಾರದರ್ಶಕತೆ ಮತ್ತು ಸ್ವಯಂ ಮೌಲ್ಯಮಾಪನಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಈ ವೇಳೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಪಿ.ವಿ.ಸ್ನೇಹ, ಡಿಎಸ್‌ಪಿ ಗಂಗಾಧರ ಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss